ಯೆರೆಮಿಯ 4:4

ಕರ್ತನಿಗೋಸ್ಕರ ಸುನ್ನತಿ ಮಾಡಿಕೊಳ್ಳಿರಿ, ನಿಮ್ಮ ಹೃದಯಗಳ ಮುಂದೊಗಲನ್ನು ತೆಗೆದುಹಾಕಿರಿ; ಇಲ್ಲದಿದ್ದರೆ ನನ್ನ ಕೋಪವು ಬೆಂಕಿಯ ಹಾಗೆ ಹೊರಟು ನಿಮ್ಮ ಕ್ರಿಯೆಗಳ ಕೆಟ್ಟತನದ ನಿಮಿತ್ತ ಯಾರೂ ಆರಿಸ ಕೂಡದ ಹಾಗೆ ಉರಿಯುವದು.

ಸಂದರ್ಭದೊಂದಿಗೆ ಓದಿ · ಯೆರೆಮಿಯ 4

2ನೀನು ಸತ್ಯದಿಂದಲೂ ನ್ಯಾಯದಿಂದಲೂ ನೀತಿ ಯಿಂದಲೂ ಕರ್ತನ ಜೀವದಾಣೆ ಎಂದು ಪ್ರಮಾಣಮಾಡುವಿ; ಆಗ ಜನಾಂಗಗಳು ಆತನಲ್ಲಿ ಆಶೀರ್ವದಿಸಿ ಕೊಳ್ಳುವವು; ಮತ್ತು ಆತನಲ್ಲಿ ಹೊಗಳಿಕೊಳ್ಳುವವು.

3ಕರ್ತನು ಯೆಹೂದದವರಿಗೂ ಯೆರೂಸಲೇಮಿ ನವರಿಗೂ ಹೀಗೆ ಹೇಳುತ್ತಾನೆ--ಯೆರೂಸಲೇಮಿನ ನಿವಾಸಿಗಳೇ, ಯೆಹೂದದ ಮನುಷ್ಯರೇ, ನಿಮ್ಮ ಬಂಜರು ಭೂಮಿಯನ್ನು ಉಳಿರಿ; ಮುಳ್ಳುಗಳಲ್ಲಿ ಬೀಜ ಬಿತ್ತಬೇಡಿರಿ.

4ಕರ್ತನಿಗೋಸ್ಕರ ಸುನ್ನತಿ ಮಾಡಿಕೊಳ್ಳಿರಿ, ನಿಮ್ಮ ಹೃದಯಗಳ ಮುಂದೊಗಲನ್ನು ತೆಗೆದುಹಾಕಿರಿ; ಇಲ್ಲದಿದ್ದರೆ ನನ್ನ ಕೋಪವು ಬೆಂಕಿಯ ಹಾಗೆ ಹೊರಟು ನಿಮ್ಮ ಕ್ರಿಯೆಗಳ ಕೆಟ್ಟತನದ ನಿಮಿತ್ತ ಯಾರೂ ಆರಿಸ ಕೂಡದ ಹಾಗೆ ಉರಿಯುವದು.

5ಯೆಹೂದದಲ್ಲಿ ಪ್ರಚಾರಪಡಿಸಿರಿ, ಯೆರೂಸ ಲೇಮಿನಲ್ಲಿ ಪ್ರಕಟಿಸಿರಿ, ದೇಶದಲ್ಲಿ ತುತೂರಿ ಊದಿ ರೆಂದು ಹೇಳಿರಿ; ಗಟ್ಟಿಯಾಗಿ ಕೂಗಿರಿ; ಕೂಡಿಕೊಂಡು ಕೋಟೆಯುಳ್ಳ ಪಟ್ಟಣಗಳಲ್ಲಿ ಪ್ರವೇಶಿಸೋಣ ಎಂದು ಹೇಳಿರಿ.

6ಚೀಯೋನಿನ ಕಡೆಗೆ ಧ್ವಜವನ್ನೆತ್ತಿರಿ; ಹಿಂದಕ್ಕೆ ಹೋಗಿರಿ, ನಿಲ್ಲಬೇಡಿರಿ; ನಾನು ಉತ್ತರದಿಂದ ಕೇಡನ್ನೂ ದೊಡ್ಡ ನಾಶನವನ್ನೂ ತರುತ್ತೇನೆ.

ಯೆರೆಮಿಯ 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी