ಮಿಕ 3:7

ಆಗ ದರ್ಶಿಗಳು ನಾಚಿಕೆಪಡುವರು, ಶಕುನಗಾರರು ವಿಸ್ಮಯಗೊಳ್ಳುವರು; ಹೌದು, ದೇವರಿಂದ ಉತ್ತರ ವಿಲ್ಲದ ಕಾರಣ ಎಲ್ಲರೂ ತಮ್ಮ ತುಟಿಗಳನ್ನು ಮುಚ್ಚಿ ಕೊಳ್ಳುವರು.

ಸಂದರ್ಭದೊಂದಿಗೆ ಓದಿ · ಮಿಕ 3

5ತನ್ನ ಜನರು ತಪ್ಪುವಂತೆ ಮಾಡುವ ಪ್ರವಾದಿಗಳ ವಿಷಯವಾಗಿ ಕರ್ತನು ಹೀಗೆ ಹೇಳುತ್ತಾನೆ--ಅವರಿಗೆ ತಿನ್ನುವದಕ್ಕೆ ಕೊಡುವಂತವರಿಗೆ--ನಿಮಗೆ ಸಮಾಧಾನವಾಗಲಿ ಎಂದು ಹೇಳುತ್ತಾರೆ; ಆದರೆ ತಮ್ಮ ಬಾಯಿಗೆ ಏನೂ ಕೊಡದವನ ವಿರೋಧವಾಗಿ ಯುದ್ಧಕ್ಕೂ ಅವರು ಸಿದ್ಧರಾಗುವರು.

6ದರ್ಶನವಿಲ್ಲದ ನಿಮಗೆ ರಾತ್ರಿ ಯಾಗುವದು; ಶಕುನವಿಲ್ಲದೆ ನಿಮಗೆ ಕತ್ತಲಾಗುವದು; ಹೌದು, ಪ್ರವಾದಿಗಳ ಮೇಲೆ ಸೂರ್ಯ ಮುಣುಗು ವದು, ಅವರ ಮೇಲೆ ಹಗಲು ಕತ್ತಲಾಗುವದು.

7ಆಗ ದರ್ಶಿಗಳು ನಾಚಿಕೆಪಡುವರು, ಶಕುನಗಾರರು ವಿಸ್ಮಯಗೊಳ್ಳುವರು; ಹೌದು, ದೇವರಿಂದ ಉತ್ತರ ವಿಲ್ಲದ ಕಾರಣ ಎಲ್ಲರೂ ತಮ್ಮ ತುಟಿಗಳನ್ನು ಮುಚ್ಚಿ ಕೊಳ್ಳುವರು.

8ಆದರೆ ನಿಶ್ಚಯವಾಗಿ ನಾನು ಯಾಕೋ ಬ್ಯರಿಗೆ ಅವನ ಅಪರಾಧವನ್ನೂ ಇಸ್ರಾಯೇಲಿಗೆ ಅವನ ಪಾಪವನ್ನೂ ತಿಳಿಸುವದಕ್ಕೆ ದೇವರ ಆತ್ಮನ ಮುಖಾಂತರ ಶಕ್ತಿಯಿಂದಲೂ ನ್ಯಾಯದಿಂದಲೂ ತ್ರಾಣದಿಂದಲೂ ತುಂಬಿದ್ದೇನೆ.

9ಯಾಕೋಬನ ಮನೆತನದವರ ಪ್ರಧಾನರೇ, ಇಸ್ರಾಯೇಲಿನ ಮನೆತನದವರ ನ್ಯಾಯಾ ಧಿಪತಿಗಳೇ, ನ್ಯಾಯವನ್ನು ಅಸಹ್ಯಿಸಿ ಎಲ್ಲಾ ಯಥಾರ್ಥ ತ್ವವನ್ನು ಡೊಂಕು ಮಾಡುವವರೇ,

ಮಿಕ 3 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी