ಧರ್ಮೋಪದೇಶಕಾಂಡ 29:27

ಕರ್ತನ ಕೋಪವು ಈ ದೇಶದ ಮೇಲೆ ಈ ಪುಸ್ತಕದಲ್ಲಿ ಬರೆದಿರುವ ಶಾಪವನ್ನೆಲ್ಲಾ ಅವರ ಮೇಲೆ ತರುವ ಹಾಗೆ ಉರಿಯಿತು.

ಸಂದರ್ಭದೊಂದಿಗೆ ಓದಿ · ಧರ್ಮೋಪದೇಶಕಾಂಡ 29

25ಆಗ ಜನರು--ಅವರು ತಮ್ಮನ್ನು ಐಗುಪ್ತ ದೇಶದೊಳಗಿಂದ ಹೊರಗೆ ತರುವಾಗ ತಮ್ಮ ಪಿತೃಗಳ ದೇವರಾದ ಕರ್ತನು ತಮ್ಮ ಸಂಗಡ ಮಾಡಿದ ಒಡಂಬಡಿಕೆಯನ್ನು ಮರೆತುಬಿಟ್ಟು,

26ಹೋಗಿ ಬೇರೆ ದೇವರುಗಳನ್ನೂ ತಮಗೆ ತಿಳಿಯದಂಥ, ಆತನು ತಮಗೆ ನೇಮಿಸದಂಥ ದೇವರುಗಳನ್ನೂ ಸೇವಿಸಿ ಅಡ್ಡಬಿದ್ದ ದರಿಂದ

27ಕರ್ತನ ಕೋಪವು ಈ ದೇಶದ ಮೇಲೆ ಈ ಪುಸ್ತಕದಲ್ಲಿ ಬರೆದಿರುವ ಶಾಪವನ್ನೆಲ್ಲಾ ಅವರ ಮೇಲೆ ತರುವ ಹಾಗೆ ಉರಿಯಿತು.

28ಕರ್ತನು ಅವ ರನ್ನು ಕೋಪದಲ್ಲಿಯೂ ಸಿಟ್ಟಿನಲ್ಲಿಯೂ ಮಹಾರೌದ್ರ ದಲ್ಲಿಯೂ ದೇಶದಲ್ಲಿಂದ ಕಿತ್ತುಹಾಕಿ ಇಂದು ಇರುವ ಪ್ರಕಾರ ಬೇರೆ ದೇಶಕ್ಕೆ ಕಳುಹಿಸಿದ್ದಾನೆ.

29ರಹಸ್ಯಗಳು ನಮ್ಮ ದೇವರಾದ ಕರ್ತನಿಗೆ ಸೇರಿದ್ದು; ಆದರೆ ಪ್ರಕಟವಾದ ಈ ನ್ಯಾಯಪ್ರಮಾಣದ ಮಾತು ಗಳನ್ನೆಲ್ಲಾ ನಾವು ಮಾಡುವಹಾಗೆ ನಮಗೂ ನಮ್ಮ ಮಕ್ಕಳಿಗೂ ನಿತ್ಯವಾಗಿ ಇರುತ್ತವೆ.

ಧರ್ಮೋಪದೇಶಕಾಂಡ 29 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी