ಯೆರೆಮಿಯ 15:16

ನಿನ್ನ ವಾಕ್ಯಗಳು ಸಿಕ್ಕಿದವು, ಅವುಗಳನ್ನು ತಿಂದೆನು. ನಿನ್ನ ವಾಕ್ಯವು ನನ್ನ ಹೃದಯಕ್ಕೆ ಉಲ್ಲಾಸವೂ ಸಂತೋಷವೂ ಆಗಿತ್ತು; ಓ ಸೈನ್ಯಗಳ ದೇವರಾದ ಕರ್ತನೇ, ನಿನ್ನ ಹೆಸರಿನಿಂದ ಕರೆಯಲ್ಪಟ್ಟಿದ್ದೇನೆ.

ಸಂದರ್ಭದೊಂದಿಗೆ ಓದಿ · ಯೆರೆಮಿಯ 15

14ನಿನ್ನನ್ನು ನಿನಗೆ ತಿಳಿಯದ ದೇಶದಲ್ಲಿ ನಿನ್ನ ಶತ್ರುಗ ಳೊಂದಿಗೆ ಹಾದುಹೋಗುವಂತೆ ಮಾಡುವೆನು. ಯಾಕಂದರೆ ನನ್ನ ಕೋಪದಲ್ಲಿ ಬೆಂಕಿ ಹತ್ತಿದೆ, ಅದು ನಿಮ್ಮ ಮೇಲೆ ಉರಿಯುವದು.

15ಓ ಕರ್ತನೇ, ನೀನೇ ಬಲ್ಲೆ, ನನ್ನನ್ನು ಜ್ಞಾಪಕ ಮಾಡಿ ವಿಚಾರಿಸಿ ನನ್ನನ್ನು ಹಿಂಸಿಸುವವರಿಗೆ ನನಗೋ ಸ್ಕರ ಮುಯ್ಯಿಗೆ ಮುಯ್ಯಿ ತೀರಿಸು; ನಿನ್ನ ದೀರ್ಘ ಶಾಂತಿಯಲ್ಲಿ ನನ್ನನ್ನು ತೆಗೆದುಬಿಡಬೇಡ; ನಿನ್ನ ನಿಮಿತ್ತ ನಾನು ಗದರಿಸಲ್ಪಡುವೆನೆಂದು ತಿಳಿದುಕೋ.

16ನಿನ್ನ ವಾಕ್ಯಗಳು ಸಿಕ್ಕಿದವು, ಅವುಗಳನ್ನು ತಿಂದೆನು. ನಿನ್ನ ವಾಕ್ಯವು ನನ್ನ ಹೃದಯಕ್ಕೆ ಉಲ್ಲಾಸವೂ ಸಂತೋಷವೂ ಆಗಿತ್ತು; ಓ ಸೈನ್ಯಗಳ ದೇವರಾದ ಕರ್ತನೇ, ನಿನ್ನ ಹೆಸರಿನಿಂದ ಕರೆಯಲ್ಪಟ್ಟಿದ್ದೇನೆ.

17ನಾನು ಹಾಸ್ಯಗಾರರ ಕೂಟದಲ್ಲಿ ಕೂತುಕೊಂಡು ಉತ್ಸಾಹಪಡಲಿಲ್ಲ, ನಿನ್ನ ಕೈ ನಿಮಿತ್ತ ಒಂಟಿಯಾಗಿ ಕೂತುಕೊಂಡಿದ್ದೇನೆ; ನನ್ನನ್ನು ಉಗ್ರತೆಯಿಂದ ತುಂಬಿಸಿದ್ದೀ.

18ಏಕೆ ನನ್ನ ನೋವು ನಿತ್ಯವಾಗಿಯೂ ನನ್ನ ಗಾಯವು ವಾಸಿಯಾಗಲೊ ಲ್ಲದೆಯೂ ಸ್ವಸ್ಥವಾಗದೆಯೂ ಇದೆ? ನೀನು ನನಗೆ ಒಟ್ಟಾರೆ ನೀರು ಬತ್ತುವ ಕಳ್ಳ ತೊರೆಯಂತೆಯೂ ಸ್ಥಿರ ವಿಲ್ಲದ ನೀರಿನಂತೆಯೂ ಇರಬೇಕೋ.

ಯೆರೆಮಿಯ 15 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी