೧ ಥೆಸಲೊನೀಕದವರಿಗೆ 2:8

ನೀವು ನಮಗೆ ಪ್ರಿಯರಾದ ಕಾರಣ ನಾವು ನಿಮ್ಮಲ್ಲಿ ಮಮತೆಯುಳ್ಳ ವರಾಗಿ ದೇವರ ಸುವಾರ್ತೆಯನ್ನು ಹೇಳುವದಕ್ಕೆ ಮಾತ್ರ ವಲ್ಲದೆ ನಿಮಗೋಸ್ಕರ ನಾವು ನಮ್ಮ ಪ್ರಾಣವನ್ನೇ ಕೊಡುವದಕ್ಕೆ ಇಷ್ಟವುಳ್ಳವರಾಗಿದ್ದೆವು.

ಸಂದರ್ಭದೊಂದಿಗೆ ಓದಿ · ೧ ಥೆಸಲೊನೀಕದವರಿಗೆ 2

6ಇದಲ್ಲದೆ ನಾವು ಕ್ರಿಸ್ತನ ಅಪೊಸ್ತಲರಾಗಿರುವದರಿಂದ ನಮ್ಮನ್ನು ಸಂರಕ್ಷಿ ಸುವ ಭಾರವನ್ನು ನಿಮ್ಮ ಮೇಲೆ ಹಾಕಬಹುದಾಗಿದ್ದರೂ ಮನುಷ್ಯರಿಂದ ಬರುವ ಮಾನವನ್ನು ನಿಮ್ಮಿಂದಾಗಲೀ ಇತರರಿಂದಾಗಲೀ ಹೊಂದಲಪೇ ಕ್ಷಿಸುವವರಾಗಿಲ್ಲ.

7ದಾದಿಯು ತನ್ನ ಮಕ್ಕಳನ್ನು ಪೋಷಿಸುವಂತೆ ನಾವು ನಿಮ್ಮ ಮಧ್ಯದಲ್ಲಿ ಸೌಮ್ಯದಿಂದಿದ್ದೆವು.

8ನೀವು ನಮಗೆ ಪ್ರಿಯರಾದ ಕಾರಣ ನಾವು ನಿಮ್ಮಲ್ಲಿ ಮಮತೆಯುಳ್ಳ ವರಾಗಿ ದೇವರ ಸುವಾರ್ತೆಯನ್ನು ಹೇಳುವದಕ್ಕೆ ಮಾತ್ರ ವಲ್ಲದೆ ನಿಮಗೋಸ್ಕರ ನಾವು ನಮ್ಮ ಪ್ರಾಣವನ್ನೇ ಕೊಡುವದಕ್ಕೆ ಇಷ್ಟವುಳ್ಳವರಾಗಿದ್ದೆವು.

9ಸಹೋದ ರರೇ, ನಾವು ನಿಮ್ಮಲ್ಲಿ ಯಾರ ಮೇಲೆಯೂ ಭಾರಹಾಕ ಬಾರದೆಂದು ಹಗಲಿರುಳು ದುಡಿದು ಜೀವನ ಮಾಡಿ ಕೊಳ್ಳುತ್ತಾ ದೇವರ ಸುವಾರ್ತೆಯನ್ನು ನಿಮಗೆ ಸಾರಿದೆವು; ಆ ನಮ್ಮ ಕಷ್ಟವೂ ಪ್ರಯಾಸವೂ ನಿಮ್ಮ ನೆನಪಿನಲ್ಲಿ ರುವದಷ್ಟೆ.

10ನಂಬುವವರಾದ ನಿಮ್ಮ ವಿಷಯದಲ್ಲಿ ನಾವು ಎಷ್ಟೋ ಶುದ್ಧರಾಗಿಯೂ ನೀತಿವಂತರಾಗಿಯೂ ನಿರ್ದೋಷಿಗಳಾಗಿಯೂ ನಡೆದುಕೊಂಡೆವೆಂಬದಕ್ಕೆ ನೀವು ಸಾಕ್ಷಿಗಳು. ದೇವರೂ ಸಾಕ್ಷಿ.

೧ ಥೆಸಲೊನೀಕದವರಿಗೆ 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी