ಧರ್ಮೋಪದೇಶಕಾಂಡ 30:9

ಇದಲ್ಲದೆ ಕರ್ತನು ನಿನ್ನನ್ನು ನಿನ್ನ ಎಲ್ಲಾ ಕೈಕೆಲಸದಲ್ಲಿ, ಗರ್ಭದ ಫಲದಲ್ಲಿ, ಪಶುಗಳ ಫಲದಲ್ಲಿ, ಭೂಮಿಯ ಫಲದಲ್ಲಿ ಒಳ್ಳೇದಕ್ಕೋಸ್ಕರ ಅಭಿವೃದ್ಧಿ ಮಾಡುವನು.

ಸಂದರ್ಭದೊಂದಿಗೆ ಓದಿ · ಧರ್ಮೋಪದೇಶಕಾಂಡ 30

7ಇದಲ್ಲದೆ ನಿನ್ನ ದೇವರಾದ ಕರ್ತನು ಆ ಶಾಪಗಳನ್ನೆಲ್ಲಾ ನಿನ್ನ ಶತ್ರುಗಳ ಮೇಲೆಯೂ ನಿನ್ನನ್ನು ಹಿಂಸಿಸಿದ ನಿನ್ನ ಹಗೆಯವರ ಮೇಲೆಯೂ ಹಾಕುವನು.

8ಆದರೆ ನೀನು ತಿರುಗಿ ಕೊಂಡು ಕರ್ತನ ಮಾತನ್ನು ಕೇಳಿ ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಆತನ ಎಲ್ಲಾ ಆಜ್ಞೆಗಳನ್ನು ಕೈಕೊಳ್ಳುವಿ.

9ಇದಲ್ಲದೆ ಕರ್ತನು ನಿನ್ನನ್ನು ನಿನ್ನ ಎಲ್ಲಾ ಕೈಕೆಲಸದಲ್ಲಿ, ಗರ್ಭದ ಫಲದಲ್ಲಿ, ಪಶುಗಳ ಫಲದಲ್ಲಿ, ಭೂಮಿಯ ಫಲದಲ್ಲಿ ಒಳ್ಳೇದಕ್ಕೋಸ್ಕರ ಅಭಿವೃದ್ಧಿ ಮಾಡುವನು.

10ನೀನು ನಿನ್ನ ದೇವರಾದ ಕರ್ತನ ಮಾತನ್ನು ಕೇಳಿ ಈ ನ್ಯಾಯಪ್ರಮಾಣದ ಪುಸ್ತಕದಲ್ಲಿ ಬರೆದಿರುವ ಆತನ ಆಜ್ಞೆ ನಿಯಮಗಳನ್ನು ಕಾಪಾಡಿ ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣ ದಿಂದಲೂ ನಿನ್ನ ದೇವರಾದ ಕರ್ತನ ಕಡೆಗೆ ತಿರುಗಿ ಕೊಂಡರೆ ಕರ್ತನು ನಿನ್ನ ಪಿತೃಗಳಲ್ಲಿ ಸಂತೋಷಿಸಿದ ಹಾಗೆ ನಿನ್ನಲ್ಲಿ ಒಳ್ಳೇದಕ್ಕೋಸ್ಕರ ಸಂತೋಷಿಸುವನು.

11ನಿಶ್ಚಯವಾಗಿ ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಈ ಆಜ್ಞೆಯು ನಿನಗೆ ಮರೆಯಾದದ್ದಲ್ಲ, ಇಲ್ಲವೆ ದೂರವಾದದ್ದಲ್ಲ.

ಧರ್ಮೋಪದೇಶಕಾಂಡ 30 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी