ಯೋಹಾನನು 16:23

ಆ ದಿನದಲ್ಲಿ ನೀವು ನನ್ನನ್ನು ಏನೂ ಕೇಳುವದಿಲ್ಲ. ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ--ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನು ಕೇಳಿಕೊಂಡರೂ ಅದನ್ನು ಆತನು ನಿಮಗೆ ಕೊಡುವನು.

ಸಂದರ್ಭದೊಂದಿಗೆ ಓದಿ · ಯೋಹಾನನು 16

21ಒಬ್ಬ ಸ್ತ್ರೀಗೆ ತನ್ನ ಪ್ರಸವವೇದನೆಯ ಗಳಿಗೆ ಬಂದಾಗ ದುಃಖವಿರುವದು; ಆಕೆಯು ಮಗುವನ್ನು ಹೆತ್ತಕೂಡಲೆ ಈ ಲೋಕದೊಳಗೆ ಒಬ್ಬ ಮನುಷ್ಯನು ಹುಟ್ಟಿದನೆಂದು ಸಂತೋಷದಿಂದ ಆ ನೋವನ್ನು ಆಕೆಯು ನೆನಪಿಗೆ ತರುವದೇ ಇಲ್ಲ.

22ಆದದರಿಂದ ಈಗ ನಿಮಗೆ ದುಃಖವುಂಟು; ಆದರೆ ನಾನು ನಿಮ್ಮನ್ನು ತಿರಿಗಿ ನೋಡುವೆನು; ಆಗ ನಿಮ್ಮ ಹೃದಯವು ಉಲ್ಲಾಸಿಸುವದು; ನಿಮ್ಮ ಆನಂದವನ್ನು ನಿಮ್ಮಿಂದ ಯಾರೂ ತೆಗೆಯುವದಿಲ್ಲ.

23ಆ ದಿನದಲ್ಲಿ ನೀವು ನನ್ನನ್ನು ಏನೂ ಕೇಳುವದಿಲ್ಲ. ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ--ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನು ಕೇಳಿಕೊಂಡರೂ ಅದನ್ನು ಆತನು ನಿಮಗೆ ಕೊಡುವನು.

24ನೀವು ಇದುವರೆಗೆ ನನ್ನ ಹೆಸರಿನಲ್ಲಿ ಏನೂ ಬೇಡಿಕೊಳ್ಳಲಿಲ್ಲ; ಬೇಡಿಕೊಳ್ಳಿರಿ, ನಿಮಗೆ ದೊರೆಯುವದು; ಆಗ ನಿಮ್ಮ ಆನಂದವು ಪರಿಪೂರ್ಣವಾಗುವದು.

25ಇವುಗಳನ್ನು ನಾನು ಸಾಮ್ಯಗಳಿಂದ ನಿಮಗೆ ಹೇಳಿದ್ದೇನೆ; ಆದರೆ ನಾನು ಇನ್ನು ಸಾಮ್ಯಗಳಿಂದ ಮಾತನಾಡದೆ ತಂದೆಯ ವಿಷಯ ನಿಮಗೆ ಸ್ಪಷ್ಟವಾಗಿ ತಿಳಿಸುವ ಸಮಯ ಬರುತ್ತದೆ.

ಯೋಹಾನನು 16 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी