ಯೆಶಾಯ 39:4

ಅದಕ್ಕೆ ಅವನು ಅವನನ್ನು--ಅವರು ನಿನ್ನ ಮನೆಯಲ್ಲಿ ಏನನ್ನು ನೋಡಿದರು ಎಂದು ಕೇಳಲು, ಹಿಜ್ಕೀಯನು--ನನ್ನ ಮನೆಯಲ್ಲಿರುವದೆಲ್ಲ ವನ್ನು ಅವರು ನೋಡಿದರು; ನನ್ನ ಭಂಡಾರದಲ್ಲಿ ನಾನು ಅವರಿಗೆ ತೋರಿಸದೆ ಇದ್ದದ್ದು ಏನೂ ಇರು ವದಿಲ್ಲ ಎಂದು ಉತ್ತರಕೊಟ್ಟನು.

ಸಂದರ್ಭದೊಂದಿಗೆ ಓದಿ · ಯೆಶಾಯ 39

2ಹಿಜ್ಕೀ ಯನು ಅದಕ್ಕೆ ಸಂತೋಷಪಟ್ಟು ಅವರಿಗೆ ಬೆಳ್ಳಿ, ಬಂಗಾರ, ಸುಗಂಧದ್ರವ್ಯ, ಪರಿಮಳತೈಲ ಮೊದ ಲಾದ ಅಮೂಲ್ಯ ಪದಾರ್ಥಗಳಿರುವ ಮನೆಯನ್ನೂ ಆಯುಧಶಾಲೆಯನ್ನೂ ತನ್ನ ಭಂಡಾರದಲ್ಲಿದ್ದದ್ದೆಲ್ಲ ವನ್ನೂ ತೋರಿಸಿದನು; ಹೀಗೆ ಹಿಜ್ಕೀಯನು ತನ್ನ ಅರಮನೆಯಲ್ಲಿಯೂ ರಾಜ್ಯದಲ್ಲಿಯೂ ಅವರಿಗೆ ತೋರಿಸದಿದ್ದ ವಸ್ತುವು ಒಂದೂ ಇರಲಿಲ್ಲ.

3ಆಗ ಪ್ರವಾದಿಯಾದ ಯೆಶಾಯನು ಅರಸನಾದ ಹಿಜ್ಕೀ ಯನ ಬಳಿಗೆ ಬಂದು ಅವನಿಗೆ--ಈ ಮನುಷ್ಯರು ಎಲ್ಲಿಂದ ನಿನ್ನ ಬಳಿಗೆ ಬಂದರು, ಅವರು ನಿನಗೆ ಏನು ಹೇಳಿದರು ಎಂದು ಕೇಳಲು, ಹಿಜ್ಕೀಯನು--ಅವರು ಬಹುದೂರ ದೇಶವಾದ ಬಾಬೆಲಿನಿಂದ ಬಂದರು ಎಂದು ಹೇಳಿದನು.

4ಅದಕ್ಕೆ ಅವನು ಅವನನ್ನು--ಅವರು ನಿನ್ನ ಮನೆಯಲ್ಲಿ ಏನನ್ನು ನೋಡಿದರು ಎಂದು ಕೇಳಲು, ಹಿಜ್ಕೀಯನು--ನನ್ನ ಮನೆಯಲ್ಲಿರುವದೆಲ್ಲ ವನ್ನು ಅವರು ನೋಡಿದರು; ನನ್ನ ಭಂಡಾರದಲ್ಲಿ ನಾನು ಅವರಿಗೆ ತೋರಿಸದೆ ಇದ್ದದ್ದು ಏನೂ ಇರು ವದಿಲ್ಲ ಎಂದು ಉತ್ತರಕೊಟ್ಟನು.

5ತರುವಾಯ ಯೆಶಾಯನು ಹಿಜ್ಕೀಯನಿಗೆ--ಸೈನ್ಯಗಳ ಕರ್ತನ ವಾಕ್ಯ ವನ್ನು ಕೇಳು--

6ಇಗೋ, ನಿನ್ನ ಪೂರ್ವಿಕರ ಕಾಲದಿಂದ ಇಂದಿನ ವರೆಗೆ ನಿನ್ನ ಮನೆಯಲ್ಲಿ ಸಂಗ್ರಹವಾದ ದ್ದೆಲ್ಲವೂ ಬಾಬೆಲಿಗೆ ಒಯ್ಯಲ್ಪಡುವ ದಿವಸವು ಬರು ವದು. ಇಲ್ಲೇನೂ ಉಳಿಯುವದಿಲ್ಲ.

ಯೆಶಾಯ 39 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी