ಯಾಜಕಕಾಂಡ 4:29

ಅವನು ತನ್ನ ಕೈಯನ್ನು ಪಾಪದ ಬಲಿಯ ಮೇಲಿಟ್ಟು ಆ ಪಾಪದ ಬಲಿಯನ್ನು ದಹನಬಲಿಯ ಸ್ಥಳದಲ್ಲಿ ವಧಿಸಬೇಕು.

ಸಂದರ್ಭದೊಂದಿಗೆ ಓದಿ · ಯಾಜಕಕಾಂಡ 4

27ಸಾಮಾನ್ಯ ಜನರಲ್ಲಿ ಯಾವನಾದರೂ ಮಾಡ ಬಾರದವುಗಳನ್ನು ಕರ್ತನ ಆಜ್ಞೆಗಳಿಗೆ ವಿರೋಧವಾಗಿ ತಿಳಿಯದೆ ಪಾಪಮಾಡಿ ಅಪರಾಧಿಯಾಗಿದ್ದರೆ

28ಇಲ್ಲವೆ ಅವನು ಮಾಡಿದ ಪಾಪವು ಅವನಿಗೆ ತಿಳಿದುಬಂದರೆ ಅವನು ಬಲಿಗಾಗಿ ಮೇಕೆಗಳಲ್ಲಿ ದೋಷವಿಲ್ಲದ ಒಂದು ಹೆಣ್ಣು ಮರಿಯನ್ನು ತಾನು ಮಾಡಿದ ಪಾಪಕ್ಕಾಗಿ ತರಬೇಕು.

29ಅವನು ತನ್ನ ಕೈಯನ್ನು ಪಾಪದ ಬಲಿಯ ಮೇಲಿಟ್ಟು ಆ ಪಾಪದ ಬಲಿಯನ್ನು ದಹನಬಲಿಯ ಸ್ಥಳದಲ್ಲಿ ವಧಿಸಬೇಕು.

30ಆಗ ಯಾಜಕನು ತನ್ನ ಬೆರಳಿನಿಂದ ಅದರ ರಕ್ತವನ್ನು ತೆಗೆದುಕೊಂಡು ದಹನ ಬಲಿ ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ ಉಳಿದ ಎಲ್ಲಾ ರಕ್ತವನ್ನು ಆ ಯಜ್ಞವೇದಿಯ ಅಡಿಯಲ್ಲಿ ಹೊಯ್ಯ ಬೇಕು.

31ಅವನು ಸಮಾಧಾನ ಯಜ್ಞ ಸಮರ್ಪಣೆಯ ಕೊಬ್ಬನ್ನು ತೆಗೆದಂತೆ ಅದರ ಎಲ್ಲಾ ಕೊಬ್ಬನ್ನು ತೆಗೆಯ ಬೇಕು; ಯಾಜಕನು ಅದನ್ನು ಯಜ್ಞವೇದಿಯ ಮೇಲೆ ಕರ್ತನಿಗೆ ಸುವಾಸನೆಯನ್ನಾಗಿ ಸುಡಬೇಕು; ಇದಲ್ಲದೆ ಯಾಜಕನು ಅವನಿಗಾಗಿ ಪ್ರಾಯಶ್ಚಿತ್ತಮಾಡ ಬೇಕು. ಆಗ ಅದು ಅವನಿಗೆ ಕ್ಷಮಿಸಲ್ಪಡುವದು.

ಯಾಜಕಕಾಂಡ 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी