ಯೆಶಾಯ 54:4

ಹೆದರಬೇಡ, ನಿನಗೆ ನಾಚಿಕೆಯಾಗುವದಿಲ್ಲ. ಇಲ್ಲವೆ ಗಾಬರಿ ಪಡಬೇಡ, ನಿನ್ನ ಯೌವನದ ಲಜ್ಜೆಯನ್ನು ಮರೆತು ಬಿಡುವಿ ನಿನ್ನ ವೈಧವ್ಯದಲ್ಲಿ ನಿನಗಾದ ನಿಂದೆಯನ್ನು ಎಂದಿಗೂ ನಿನ್ನ ಜ್ಞಾಪಕಕ್ಕೆ ತರುವದಿಲ್ಲ.

ಸಂದರ್ಭದೊಂದಿಗೆ ಓದಿ · ಯೆಶಾಯ 54

2ನಿನ್ನ ಗುಡಾರದ ಸ್ಥಳವನ್ನು ವಿಸ್ತರಿಸು ನಿನ್ನ ನಿವಾಸದ ಪರದೆಗಳು ಹರಡಲಿ; ಹಿಂತೆ ಗೆಯಬೇಡ; ನಿನ್ನ ಹಗ್ಗಗಳನ್ನು ಉದ್ದ ಮಾಡಿ ಗೂಟ ಗಳನ್ನು ಬಲಪಡಿಸು.

3ನೀನು ಬಲಗಡೆಗೂ ಎಡ ಗಡೆಗೂ ಹಬ್ಬಿಕೊಳ್ಳುವಿ; ನಿನ್ನ ಸಂತಾನವು ಅನ್ಯ ಜನಾಂಗಗಳನ್ನು ವಶಪಡಿಸಿಕೊಂಡು ಹಾಳಾದ ಪಟ್ಟಣ ಗಳನ್ನು ನಿವಾಸವಾಗಮಾಡುವದು.

4ಹೆದರಬೇಡ, ನಿನಗೆ ನಾಚಿಕೆಯಾಗುವದಿಲ್ಲ. ಇಲ್ಲವೆ ಗಾಬರಿ ಪಡಬೇಡ, ನಿನ್ನ ಯೌವನದ ಲಜ್ಜೆಯನ್ನು ಮರೆತು ಬಿಡುವಿ ನಿನ್ನ ವೈಧವ್ಯದಲ್ಲಿ ನಿನಗಾದ ನಿಂದೆಯನ್ನು ಎಂದಿಗೂ ನಿನ್ನ ಜ್ಞಾಪಕಕ್ಕೆ ತರುವದಿಲ್ಲ.

5ನಿನ್ನನ್ನು ಉಂಟುಮಾಡಿದವನೇ ನಿನ್ನ ಪತಿ; ಸೈನ್ಯಗಳ ಕರ್ತನು ಎಂಬದು ಆತನ ಹೆಸರು; ನಿನ್ನ ವಿಮೋಚಕನು ಇಸ್ರಾ ಯೇಲಿನ ಪರಿಶುದ್ಧನೇ; ಸಮಸ್ತ ಭೂಮಿಯ ದೇವರು ಎಂದು ಆತನು ಕರೆಯಲ್ಪಡುವನು.

6ನೀನು ಬಿಡಲ್ಪಟ್ಟು ಆತ್ಮದಲ್ಲಿ ವ್ಯಥೆಪಟ್ಟ ಹೆಂಗಸು, ತ್ಯಜಿಸಲ್ಪಟ್ಟವಳಾದ ಯೌವನದ ಪತ್ನಿಯ ಹಾಗೆ ಇದ್ದಾಗ ಕರ್ತನು ನಿನ್ನನ್ನು ಕರೆದಿದ್ದಾನೆ ಎಂದು ನಿನ್ನ ದೇವರು ಹೇಳುತ್ತಾನೆ.

ಯೆಶಾಯ 54 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी