ಯೆರೆಮಿಯ 32:11

ಆಗ ನಾನು ಆಜ್ಞೆ ನಿಯಮಗಳ ಪ್ರಕಾರ ಮುದ್ರೆ ಹಾಕಿದ ಕ್ರಯಪತ್ರವನ್ನೂ ತೆರೆದಿರುವದನ್ನೂ ತಕ್ಕೊಂಡೆನು.

ಸಂದರ್ಭದೊಂದಿಗೆ ಓದಿ · ಯೆರೆಮಿಯ 32

9ಹಾಗೆ ನಾನು ನನ್ನ ಚಿಕ್ಕಪ್ಪನ ಮಗನಾದ ಹನಮೇಲನಿಂದ ಅನಾತೋತಿನಲ್ಲಿದ್ದ ಹೊಲವನ್ನು ಕೊಂಡುಕೊಂಡು ಅವನಿಗೆ ಹದಿನೇಳು ಬೆಳ್ಳಿ ಶೇಕೆಲುಗಳನ್ನು ತೂಕ ಮಾಡಿ ಕ್ರಯಕೊಟ್ಟೆನು.

10ನಾನು ಪತ್ರದಲ್ಲಿ ಬರೆದು, ಅದಕ್ಕೆ ಮುದ್ರೆ ಹಾಕಿ, ಸಾಕ್ಷಿಗಳನ್ನಿಟ್ಟು ಬೆಳ್ಳಿಯನ್ನು ತ್ರಾಸಿನಲ್ಲಿ ತೂಕ ಮಾಡಿ ದೆನು.

11ಆಗ ನಾನು ಆಜ್ಞೆ ನಿಯಮಗಳ ಪ್ರಕಾರ ಮುದ್ರೆ ಹಾಕಿದ ಕ್ರಯಪತ್ರವನ್ನೂ ತೆರೆದಿರುವದನ್ನೂ ತಕ್ಕೊಂಡೆನು.

12ಆ ಕ್ರಯಪತ್ರವನ್ನು ನನ್ನ ಚಿಕ್ಕಪ್ಪನ ಮಗನಾದ ಹನಮೇಲನ ಮುಂದೆಯೂ ಕ್ರಯಪತ್ರ ದಲ್ಲಿ ರುಜು ಹಾಕಿದ ಸಾಕ್ಷಿಗಳ ಮುಂದೆಯೂ ಸೆರೆ ಮನೆಯ ಅಂಗಳದಲ್ಲಿ ಕೂತುಕೊಂಡಿದ್ದ ಯೆಹೂದ್ಯ ರೆಲ್ಲರ ಮುಂದೆಯೂ ಮಹ್ಸೇಮನ ಮಗನಾದ ನೇರೀ ಯನ ಮಗನಾದ ಬಾರೂಕನಿಗೆ ಕೊಟ್ಟೆನು.

13ಅವರ ಮುಂದೆ ನಾನು ಬಾರೂಕನಿಗೆ ಅಪ್ಪಣೆ ಕೊಟ್ಟದ್ದೇ ನಂದರೆ--

ಯೆರೆಮಿಯ 32 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी