೧ ಪೂರ್ವಕಾಲವೃತ್ತಾಂತ 28:5

ಕರ್ತನು ನನಗೆ ಅನೇಕ ಕುಮಾ ರರನ್ನು ಕೊಟ್ಟಿರುವಾಗ ನನ್ನ ಸಮಸ್ತ ಕುಮಾರರಲ್ಲಿ ಇಸ್ರಾಯೇಲಿನ ಮೇಲಾಗಿ ಕರ್ತನ ರಾಜ್ಯದ ಸಿಂಹಾ ಸನದ ಮೇಲೆ ಕುಳಿತುಕೊಳ್ಳುವದಕ್ಕೆ ನನ್ನ ಮಗನಾದ ಸೊಲೊಮೋನನನ್ನು ಆದುಕೊಂಡನು.

ಸಂದರ್ಭದೊಂದಿಗೆ ಓದಿ · ೧ ಪೂರ್ವಕಾಲವೃತ್ತಾಂತ 28

3ಆದರೆ ದೇವರು ನನಗೆ--ನೀನು ನನ್ನ ಹೆಸರಿಗೆ ಮನೆಯನ್ನು ಕಟ್ಟಬೇಡ; ಯಾಕಂದರೆ ನೀನು ಯುದ್ಧದ ಮನುಷ್ಯನಾಗಿದ್ದೀ; ರಕ್ತವನ್ನು ಚೆಲ್ಲಿದ್ದೀ ಅಂದನು.

4ಆದರೆ ಇಸ್ರಾಯೇಲಿನ ಕರ್ತನಾದ ದೇವರು ಎಂದೆಂದಿಗೂ ಇಸ್ರಾಯೇಲಿನ ಮೇಲೆ ಅರಸನಾಗಿರಲು ನನ್ನ ತಂದೆಯ ಮನೆಯ ಸಮಸ್ತರಿಂದ ನನ್ನನ್ನು ಆದುಕೊಂಡನು. ಯಾಕಂದರೆ ನಾನು ನಾಯಕನಾಗಿರಲು ಯೆಹೂದನನ್ನೂ ಯೆಹೂ ದನ ಮನೆಯಲ್ಲಿ ನನ್ನ ತಂದೆಯ ಮನೆಯನ್ನೂ ಆದು ಕೊಂಡು ನನ್ನ ತಂದೆಯ ಕುಮಾರರಲ್ಲಿ ನನ್ನನ್ನು ಸಮಸ್ತ ಇಸ್ರಾಯೇಲಿನ ಮೇಲೆ ಅರಸನಾಗ ಮಾಡಲು ಚಿತ್ತ ವುಳ್ಳವನಾಗಿದ್ದನು;

5ಕರ್ತನು ನನಗೆ ಅನೇಕ ಕುಮಾ ರರನ್ನು ಕೊಟ್ಟಿರುವಾಗ ನನ್ನ ಸಮಸ್ತ ಕುಮಾರರಲ್ಲಿ ಇಸ್ರಾಯೇಲಿನ ಮೇಲಾಗಿ ಕರ್ತನ ರಾಜ್ಯದ ಸಿಂಹಾ ಸನದ ಮೇಲೆ ಕುಳಿತುಕೊಳ್ಳುವದಕ್ಕೆ ನನ್ನ ಮಗನಾದ ಸೊಲೊಮೋನನನ್ನು ಆದುಕೊಂಡನು.

6ಆತನು ನನ್ನ ಸಂಗಡ--ನಿನ್ನ ಮಗನಾದ ಸೊಲೊಮೋನನು ತಾನೇನನ್ನ ಮನೆಯನ್ನೂ ಅಂಗಳಗಳನ್ನೂ ಕಟ್ಟಿಸುವನು; ಅವನನ್ನು ನನಗೆ ಮಗನಾಗಿರಲು ಆದುಕೊಂಡೆನು. ನಾನು ಅವನಿಗೆ ತಂದೆಯಾಗಿರುವೆನು.

7ಇದಲ್ಲದೆ ಈಗಿನಂತೆ ನನ್ನ ಆಜ್ಞೆಗಳನ್ನೂ ನ್ಯಾಯಗಳನ್ನೂ ಅವನು ನಡಿಸಲು ದೃಢವಾಗಿದ್ದರೆ ಅವನ ರಾಜ್ಯವನ್ನು ಯುಗ ಯುಗಾಂತರಕ್ಕೂ ಸ್ಥಿರಪಡಿಸುವೆನು ಅಂದನು.

೧ ಪೂರ್ವಕಾಲವೃತ್ತಾಂತ 28 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी