ಯೆಶಾಯ 1:3

ಎತ್ತು ತನ್ನ ಯಜಮಾನನನ್ನು ಮತ್ತು ಕತ್ತೆಯು ತನ್ನ ಒಡೆ ಯನ ಕೊಟ್ಟಿಗೆಯನ್ನು ತಿಳಿದಿರುವವು; ಆದರೆ ಇಸ್ರಾ ಯೇಲಿಗೆ ತಿಳಿದಿಲ್ಲ; ನನ್ನ ಜನರು ಆಲೋಚಿಸುವ ದಿಲ್ಲ.

ಸಂದರ್ಭದೊಂದಿಗೆ ಓದಿ · ಯೆಶಾಯ 1

1ಯೆಹೂದ ದೇಶದ ಅರಸರುಗಳಾದ ಉಜ್ಜೀಯ, ಯೋಥಾಮ, ಆಹಾಜ, ಹಿಜ್ಕೀಯ ಇವರ ಕಾಲದಲ್ಲಿ ಯೆಹೂದದ ಮತ್ತು ಯೆರೂಸಲೇಮಿನ ವಿಷಯವಾಗಿ ಆಮೋಚನ ಮಗ ನಾದ ಯೆಶಾಯನಿಗಾದ ದರ್ಶನವು.

2ಓ ಆಕಾಶ ಗಳೇ, ಕೇಳಿರಿ; ಓ ಭೂಮಿಯೇ, ಕಿವಿಗೊಡು; ಕರ್ತನು ಮಾತನಾಡುತ್ತಿದ್ದಾನೆ: ನಾನು ಸಾಕಿ ಸಲಹಿದ ಮಕ್ಕಳೇ, ನನಗೆ ವಿರೋಧವಾಗಿ ಎದುರುಬಿದ್ದಿದ್ದಾರೆ.

3ಎತ್ತು ತನ್ನ ಯಜಮಾನನನ್ನು ಮತ್ತು ಕತ್ತೆಯು ತನ್ನ ಒಡೆ ಯನ ಕೊಟ್ಟಿಗೆಯನ್ನು ತಿಳಿದಿರುವವು; ಆದರೆ ಇಸ್ರಾ ಯೇಲಿಗೆ ತಿಳಿದಿಲ್ಲ; ನನ್ನ ಜನರು ಆಲೋಚಿಸುವ ದಿಲ್ಲ.

4ಹಾ, ಪಾಪಿಷ್ಠ ಜನಾಂಗವೇ, ದುಷ್ಟತನದ ಭಾರವನ್ನು ಹೊತ್ತಿರುವ ಪ್ರಜೆಯೇ, ದುಷ್ಟಸಂತ ತಿಯೇ, ಭ್ರಷ್ಟರಾದ ಮಕ್ಕಳೇ, ಕರ್ತನನ್ನು ಅವರು ತೊರೆದುಬಿಟ್ಟಿದ್ದಾರೆ. ಇಸ್ರಾಯೇಲಿನ ಪರಿಶುದ್ಧನಾ ದಾತನಿಗೆ ಕೋಪವನ್ನೆಬ್ಬಿಸುವಂತೆ ಅವರು ಹಿಂದಕ್ಕೆ ಹೋಗಿದ್ದಾರೆ.

5ನೀವು ಹೆಚ್ಚೆಚ್ಚಾಗಿ ತಿರುಗಿಬಿದ್ದು ಯಾಕೆ ನೀವು ಇನ್ನು ಹೊಡೆಯಿಸಿಕೊಳ್ಳುತ್ತೀರಿ. ತಲೆ ಯೆಲ್ಲಾ ರೋಗ, ಹೃದಯವೆಲ್ಲಾ ದುರ್ಬಲ.

ಯೆಶಾಯ 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी