೨ ಅರಸುಗಳು 10:29

ಆದರೆ ಬೇತೇಲ್‌, ದಾನ್‌ನಲ್ಲಿಯೂ ಇರುವ ಬಂಗಾರದ ಹೋರಿಗಳಿಂದ ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳನ್ನು ಯೇಹುವು ತೊರೆದುಬಿಡಲಿಲ್ಲ.

ಸಂದರ್ಭದೊಂದಿಗೆ ಓದಿ · ೨ ಅರಸುಗಳು 10

27ಇದಲ್ಲದೆ ಅವರು ಬಾಳನ ವಿಗ್ರಹ ವನ್ನು ಒಡೆದುಹಾಕಿ ಬಾಳನ ಮನೆಯನ್ನು ಕೆಡವಿಬಿಟ್ಟು ಅದನ್ನು ಈ ಹೊತ್ತಿನ ವರೆಗೂ ತಿಪ್ಪೆಯಾಗಿ ಮಾಡಿದರು.

28ಹೀಗೆಯೇ ಯೇಹುವು ಬಾಳನನ್ನು ಇಸ್ರಾಯೇಲಿ ನಲ್ಲಿಂದ ನಾಶಮಾಡಿಬಿಟ್ಟನು.

29ಆದರೆ ಬೇತೇಲ್‌, ದಾನ್‌ನಲ್ಲಿಯೂ ಇರುವ ಬಂಗಾರದ ಹೋರಿಗಳಿಂದ ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳನ್ನು ಯೇಹುವು ತೊರೆದುಬಿಡಲಿಲ್ಲ.

30ಕರ್ತನು ಯೇಹು ವಿಗೆ--ನೀನು ನನ್ನ ದೃಷ್ಟಿಗೆ ಸರಿಯಾದದ್ದನ್ನು ನಡಿಸಿ ನನ್ನ ಹೃದಯದಲ್ಲಿದ್ದ ಎಲ್ಲಾದರ ಪ್ರಕಾರ ಅಹಾಬನ ಮನೆಗೆ ಮಾಡಿ ಯುಕ್ತವಾದದ್ದನ್ನು ಮಾಡಿದ್ದರಿಂದ ನಿನ್ನ ಮಕ್ಕಳು ನಾಲ್ಕು ವಂಶಗಳ ವರೆಗೂ ಇಸ್ರಾಯೇ ಲಿನ ಸಿಂಹಾಸನದ ಮೇಲೆ ಕುಳಿತುಕೊಳ್ಳುವರು ಅಂದನು.

31ಆದರೆ ಯೇಹುವು ತನ್ನ ಪೂರ್ಣಹೃದಯ ದಿಂದ ಇಸ್ರಾಯೇಲಿನ ದೇವರಾದ ಕರ್ತನ ನ್ಯಾಯ ಪ್ರಮಾಣದಲ್ಲಿ ನಡೆಯುವ ಹಾಗೆ ಎಚ್ಚರಿಕೆಯಾಗಿರ ಲಿಲ್ಲ; ಇಸ್ರಾಯೇಲ್ಯರನ್ನು ಪಾಪಮಾಡಲು ಪ್ರೇರೇಪಿ ಸಿದ ಯಾರೊಬ್ಬಾಮನ ಪಾಪಗಳನ್ನು ತೊರೆದು ಬಿಡಲಿಲ್ಲ.

೨ ಅರಸುಗಳು 10 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी