ಯೆಶಾಯ 14:11

ನಿನ್ನ ವೈಭವವೂ ವೀಣೆಗಳ ಸ್ವರವೂ ಸಮಾಧಿಗೆ ಇಳಿಸಲ್ಪಟ್ಟಿವೆ. ನಿನಗೆ ಹುಳುಗಳೇ ಹಾಸಿಗೆ, ನಿನ್ನ ಹೊದಿಕೆಯು ಕ್ರಿಮಿಗಳೇ;

ಸಂದರ್ಭದೊಂದಿಗೆ ಓದಿ · ಯೆಶಾಯ 14

9ನಿನಗೋ ಸ್ಕರ ನಿನ್ನ ಬರೋಣವನ್ನು ಎದುರುಗೊಳ್ಳುವದಕ್ಕೆ ಪಾತಾಳವು ಕೆಳಗಿನಿಂದ ತಳಮಳಪಡುತ್ತದೆ. ಸತ್ತವ ರನ್ನೂ ಅಂದರೆ, ಭೂಲೋಕದ ಮುಖಂಡರಾಗಿದ್ದವರೆ ಲ್ಲರನ್ನೂ ಕಲಕಿ (ಎಚ್ಚರಿಸಿ) ಜನಾಂಗಗಳ ಎಲ್ಲಾ ರಾಜ ರುಗಳನ್ನು ಅವರ ಸಿಂಹಾಸನಗಳಿಂದ ಎಬ್ಬಿಸುತ್ತದೆ.

10ಅವರೆಲ್ಲರು ನಿನಗೆ--ನಮ್ಮ ಹಾಗೆ ನೀನು ಸಹ ಬಲಹೀನನಾಗಿದ್ದೀ, ನೀನು ನಮ್ಮ ಸಮಾನನಾಗಿದ್ದೀ ಎಂದು ಮಾತಾಡಿ ಹೇಳುವರು.

11ನಿನ್ನ ವೈಭವವೂ ವೀಣೆಗಳ ಸ್ವರವೂ ಸಮಾಧಿಗೆ ಇಳಿಸಲ್ಪಟ್ಟಿವೆ. ನಿನಗೆ ಹುಳುಗಳೇ ಹಾಸಿಗೆ, ನಿನ್ನ ಹೊದಿಕೆಯು ಕ್ರಿಮಿಗಳೇ;

12ಓ ಲೂಸಿಫರ್‌ ಉದಯದ ಮಗನೇ. ಆಕಾಶದಿಂದ ನೀನು ಹೇಗೆ ಬಿದ್ದೀ? ಜನಾಂಗಗಳನ್ನು ಬಲಹೀನ ಮಾಡಿದ ನೀನು ಭೂಮಿಗೆ ಹೇಗೆ ಕಡಿಯಲ್ಪಟ್ಟಿದ್ದೀ?

13ನೀನು ನಿನ್ನ ಹೃದಯದಲ್ಲಿ ನಾನು ಆಕಾಶಕ್ಕೆ ಏರಿ ದೇವರ ನಕ್ಷತ್ರಗಳ ಮೇಲೆ ನನ್ನ ಸಿಂಹಾಸನವನ್ನು ಘನತೆಗೇರಿಸುವೆನು; ಉತ್ತರ ದಿಕ್ಕಿನ ಕಡೆಗಿರುವ ಸಮೂಹ ಪರ್ವತದ ಮೇಲೆಯೂ ನಾನು ಆಸೀನನಾ ಗುವೆನು.

ಯೆಶಾಯ 14 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी