ಓ ನನ್ನ ದೇವರೇ, ದುಷ್ಟನ ಕೈಗೂ ಅನ್ಯಾಯ ಮಾಡುವ ಕ್ರೂರನ ಕೈಗೂ ನನ್ನನ್ನು ತಪ್ಪಿಸು.
2ನಿನ್ನ ನೀತಿಯಲ್ಲಿ ನನ್ನನ್ನು ಬಿಡಿಸಿ ನನ್ನನ್ನು ತಪ್ಪಿಸು; ನಿನ್ನ ಕಿವಿಯನ್ನು ನನ್ನ ಕಡೆಗೆ ತಿರುಗಿಸಿ ನನ್ನನ್ನು ರಕ್ಷಿಸು.
3ನೀನು ಯಾವಾಗಲೂ ನಾನು ಆಶ್ರಯಿಸಿಕೊಳ್ಳುವ ಬಲಸ್ಥಾನವಾಗಿರು. ನನ್ನನ್ನು ರಕ್ಷಿಸುವದಕ್ಕೆ ಆಜ್ಞಾಪಿಸಿದ್ದೀ, ನನ್ನ ಬಂಡೆಯೂ ಕೋಟೆಯೂ ನೀನೇ.
4ಓ ನನ್ನ ದೇವರೇ, ದುಷ್ಟನ ಕೈಗೂ ಅನ್ಯಾಯ ಮಾಡುವ ಕ್ರೂರನ ಕೈಗೂ ನನ್ನನ್ನು ತಪ್ಪಿಸು.
5ಓ ಕರ್ತನಾದ ದೇವರೇ, ನೀನು ನನ್ನ ನಿರೀಕ್ಷೆಯೂ ನನ್ನ ಯೌವನದಿಂದ ನನ್ನ ಭರವಸವೂ ಆಗಿದ್ದೀ.
6ಗರ್ಭದಿಂದಲೇ ನಿನ್ನ ಮೇಲೆ ಆತುಕೊಂಡಿದ್ದೇನೆ; ತಾಯಿಯ ಗರ್ಭದಿಂದ ನೀನು ನನ್ನನ್ನು ಹೊರಗೆ ತಂದಿದ್ದಿ. ಯಾವಾಗಲೂ ನಿನ್ನಲ್ಲಿ ನನ್ನ ಸ್ತೋತ್ರವು ಇರುವದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ