ಅವು ಮಾಯವೇ, ಮೋಸದ ಕೆಲಸವೇ; ಅವುಗಳ ವಿಚಾರಣೆಯ ಕಾಲದಲ್ಲಿ ನಾಶವಾಗುವವು.
16ಆತನು ತನ್ನ ಶಬ್ದವನ್ನು ಎತ್ತುವಾಗ ಆಕಾಶದಲ್ಲಿ ನೀರಿನ ಘೋಷವದೆ; ಆತನು ಭೂಮಿಯ ಅಂತ್ಯದಿಂದ ಹಬೆಯನ್ನು ಏರ ಮಾಡುತ್ತಾನೆ; ಮಳೆಯ ಸಂಗಡ ಮಿಂಚುಗಳನ್ನು ಮಾಡಿ ತನ್ನ ಭಂಡಾರಗಳೊ ಳಗಿಂದ ಗಾಳಿಯನ್ನು ಹೊರಗೆ ತರುತ್ತಾನೆ.
17ಮನುಷ್ಯ ರೆಲ್ಲರೂ ತಮ್ಮ ತಿಳುವಳಿಕೆಯಿಂದ ಮೂಢರಾಗಿದ್ದಾರೆ; ಎರಕ ಹೊಯ್ಯುವವರೆಲ್ಲರೂ ವಿಗ್ರಹದಿಂದ ನಾಚಿಕೆ ಪಡುತ್ತಾರೆ; ಅವರ ಎರಕದ ಬೊಂಬೆಗಳು ಸುಳ್ಳೇ; ಅವುಗಳಲ್ಲಿ ಉಸಿರು ಇಲ್ಲ.
18ಅವು ಮಾಯವೇ, ಮೋಸದ ಕೆಲಸವೇ; ಅವುಗಳ ವಿಚಾರಣೆಯ ಕಾಲದಲ್ಲಿ ನಾಶವಾಗುವವು.
19ಯಾಕೋಬನ ಭಾಗವು ಇವುಗಳ ಹಾಗಲ್ಲ; ಆತನು ಎಲ್ಲವನ್ನು ರೂಪಿಸಿದವನೇ, ಆತನ ಸ್ವಾಸ್ತ್ಯದ ಕೋಲು ಇಸ್ರಾಯೇಲೇ; ಆತನ ಹೆಸರು ಸೈನ್ಯಗಳ ಕರ್ತನೇ.
20ನೀನು ನನ್ನ ಸುತ್ತಿಗೆಯೇ, ನನ್ನ ಯುದ್ಧದ ಆಯುಧಗಳೇ, ನಿನ್ನಿಂದ ಜನಾಂಗಗಳನ್ನು ಚೂರು ಚೂರಾಗಿ ಒಡೆದು ಬಿಡುತ್ತೇನೆ, ನಿನ್ನಿಂದ ರಾಜ್ಯಗಳನ್ನು ನಾಶಮಾಡುತ್ತೇನೆ;
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ