ಯೆಹೆಜ್ಕೇಲನು 44:27

ಅವನು ಪರಿಶುದ್ಧ ಸ್ಥಳದಲ್ಲಿ ಸೇವೆ ಮಾಡುವದ ಕ್ಕೋಸ್ಕರ ಒಳಗಿನ ಅಂಗಳದ ಪರಿಶುದ್ಧ ಸ್ಥಳಕ್ಕೆ ಬರುವ ದಿನದಲ್ಲಿ ತನ್ನ ಪಾಪ ಬಲಿಯನ್ನು ಅರ್ಪಿಸಬೇಕೆಂದು ದೇವರಾದ ಕರ್ತನು ಹೇಳುತ್ತಾನೆ.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 44

25ಅವರು ಸತ್ತ ಮನುಷ್ಯರ ಬಳಿಗೆ ಬಂದು ಅಶುದ್ಧರಾಗಬಾರದು. ಆದರೆ ತಂದೆ ತಾಯಿ, ಮಗ, ಮಗಳು, ಸಹೋದರ, ಮತ್ತು ಗಂಡ ಇಲ್ಲದ ಸಹೋದರಿ, ಇವರಿಗೋಸ್ಕರ ಅವರು ಅಶುದ್ಧರಾಗಬಹುದು.

26ಅವನು ಶುದ್ಧನಾದ ಮೇಲೆ ಅವನಿಗೆ ಏಳು ದಿವಸಗಳನ್ನು ಪ್ರತ್ಯೇಕಿಸಬೇಕು.

27ಅವನು ಪರಿಶುದ್ಧ ಸ್ಥಳದಲ್ಲಿ ಸೇವೆ ಮಾಡುವದ ಕ್ಕೋಸ್ಕರ ಒಳಗಿನ ಅಂಗಳದ ಪರಿಶುದ್ಧ ಸ್ಥಳಕ್ಕೆ ಬರುವ ದಿನದಲ್ಲಿ ತನ್ನ ಪಾಪ ಬಲಿಯನ್ನು ಅರ್ಪಿಸಬೇಕೆಂದು ದೇವರಾದ ಕರ್ತನು ಹೇಳುತ್ತಾನೆ.

28ಇದು ಅವರಿಗೆ ಬಾಧ್ಯತೆಯಾಗಿರುವದು; ನಾನೇ ಅವರಿಗೆ ಬಾಧ್ಯನಾಗಿ ರುವೆನು; ನೀವು ಇಸ್ರಾಯೇಲಿನಲ್ಲಿ ಅವರಿಗೆ ಸ್ವಾಸ್ತ್ಯ ವನ್ನು ಕೊಡಬಾರದು ಯಾಕಂದರೆ ನಾನೇ ಅವರಿಗೆ ಸ್ವಾಸ್ತ್ಯವಾಗಿರುವೆನು.

29ಆಹಾರದ ಅರ್ಪಣೆಯನ್ನು ಪಾಪ ಬಲಿಯನ್ನೂ ಅಪರಾಧ ಬಲಿಯನ್ನೂ ಅವರು ತಿನ್ನಬೇಕು; ಇಸ್ರಾಯೇಲಿನಲ್ಲಿ ಪ್ರತಿಷ್ಠೆ ಮಾಡಿದ್ದೆಲ್ಲವೂ ಅವರಿಗೆ ಸಲ್ಲಬೇಕು.

ಯೆಹೆಜ್ಕೇಲನು 44 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी