ಕೀರ್ತನೆಗಳು 42:7

ನಿನ್ನ ನೀರಿನ ಪ್ರವಾಹದ ಶಬ್ದದಿಂದ ಅಗಾಧವು ಅಗಾಧಕ್ಕೆ ಕೂಗು ತ್ತದೆ; ನಿನ್ನ ಅಲೆಗಳೂ ತೆರೆಗಳೂ ಎಲ್ಲಾ ನನ್ನ ಮೇಲೆ ಹಾದುಹೋಗಿವೆ.

ಸಂದರ್ಭದೊಂದಿಗೆ ಓದಿ · ಕೀರ್ತನೆಗಳು 42

5ನನ್ನ ಪ್ರಾಣವೇ,ನೀನು ಕುಗ್ಗಿಹೋಗಿರುವದೇನು? ನನ್ನಲ್ಲಿ ನೀನು ಯಾಕೆ ವ್ಯಾಕುಲಪಡುತ್ತೀ? ದೇವರನ್ನು ನಿರೀಕ್ಷಿಸು; ನಾನು ಆತನ ಸಹಾಯಕ್ಕಾಗಿ ಆತನನ್ನು ಇನ್ನೂ ಕೊಂಡಾಡುವೆನು.

6ಓ ನನ್ನ ದೇವರೇ, ನನ್ನ ಪ್ರಾಣವು ನನ್ನಲ್ಲಿ ಕುಗ್ಗು ತ್ತದೆ; ಆದದರಿಂದ ಯೊರ್ದನ್‌ ಸೀಮೆಯಿಂದಲೂ ಹೆರ್ಮೋನ್ಯರಿಂದಲೂ ಮಿಸಾರ್‌ ಸಣ್ಣ ಬೆಟ್ಟದಿಂದಲೂ ನಿನ್ನನ್ನು ಜ್ಞಾಪಕಮಾಡಿಕೊಳ್ಳುತ್ತೇನೆ.

7ನಿನ್ನ ನೀರಿನ ಪ್ರವಾಹದ ಶಬ್ದದಿಂದ ಅಗಾಧವು ಅಗಾಧಕ್ಕೆ ಕೂಗು ತ್ತದೆ; ನಿನ್ನ ಅಲೆಗಳೂ ತೆರೆಗಳೂ ಎಲ್ಲಾ ನನ್ನ ಮೇಲೆ ಹಾದುಹೋಗಿವೆ.

8ಆದಾಗ್ಯೂ ಹಗಲಿನಲ್ಲಿ ಕರ್ತನು ತನ್ನ ಪ್ರೀತಿ, ಕರುಣೆಯನ್ನು ಆಜ್ಞಾಪಿಸುತ್ತಾನೆ; ರಾತ್ರಿ ಯಲ್ಲಿ ನನ್ನೊಂದಿಗೆ ಆತನ ಹಾಡೂ ನನ್ನ ಜೀವಾ ಧಾರಕನಾದ ದೇವರಿಗೆ ಪ್ರಾರ್ಥಿಸುವೆನು.

9ದೇವರೇ, ಯಾಕೆ ನನ್ನನ್ನು ಮರೆತುಬಿಟ್ಟಿದ್ದೀ? ಯಾಕೆ ನಾನು ಶತ್ರುವಿನ ಬಾಧೆಯಲ್ಲಿ ಇದ್ದು ದುಃಖದಲ್ಲಿ ನಡೆದು ಕೊಳ್ಳಬೇಕೆಂದು ನನ್ನ ಬಂಡೆಯಾದ ದೇವರಿಗೆ ನಾನು ಹೇಳುವೆನು?

ಕೀರ್ತನೆಗಳು 42 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी