ಯಾಜಕಕಾಂಡ 4:6

ಯಾಜಕನು ತನ್ನ ಬೆರಳನ್ನು ರಕ್ತದಲ್ಲಿ ಅದ್ದಿ ಕರ್ತನ ಮುಂದೆಯೂ ಪವಿತ್ರ ಸ್ಥಳದ ಪರದೆಯ ಮುಂದೆಯೂ ಆ ರಕ್ತವನ್ನು ಏಳು ಸಾರಿ ಚಿಮುಕಿಸಬೇಕು.

ಸಂದರ್ಭದೊಂದಿಗೆ ಓದಿ · ಯಾಜಕಕಾಂಡ 4

4ಅವನು ಆ ಹೋರಿ ಯನ್ನು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಕರ್ತನ ಎದುರಿಗೆ ತಂದು ತನ್ನ ಕೈಯನ್ನು ಅದರ ತಲೆಯ ಮೇಲಿಟ್ಟು ಆ ಹೋರಿಯನ್ನು ಕರ್ತನ ಮುಂದೆ ವಧಿಸ ಬೇಕು.

5ಆಗ ಅಭಿಷಿಕ್ತನಾದ ಯಾಜಕನು ಆ ಹೋರಿ ಯ ರಕ್ತವನ್ನು ತೆಗೆದುಕೊಂಡು ಸಭೆಯ ಗುಡಾರದ ಬಳಿಗೆ ತರಬೇಕು.

6ಯಾಜಕನು ತನ್ನ ಬೆರಳನ್ನು ರಕ್ತದಲ್ಲಿ ಅದ್ದಿ ಕರ್ತನ ಮುಂದೆಯೂ ಪವಿತ್ರ ಸ್ಥಳದ ಪರದೆಯ ಮುಂದೆಯೂ ಆ ರಕ್ತವನ್ನು ಏಳು ಸಾರಿ ಚಿಮುಕಿಸಬೇಕು.

7ಯಾಜಕನು ಸ್ವಲ್ಪ ರಕ್ತವನ್ನು ಸಭೆಯ ಗುಡಾರ ದೊಳಗಿರುವ ಸುವಾಸನೆಯುಳ್ಳ ಧೂಪ ಯಜ್ಞವೇದಿಯ ಕೊಂಬುಗಳಿಗೆ ಕರ್ತನ ಮುಂದೆ ಹಚ್ಚಬೇಕು; ಅಲ್ಲದೆ ಆ ಹೋರಿಯ ಎಲ್ಲಾ ರಕ್ತವನ್ನು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿರುವ ದಹನಬಲಿ ಯಜ್ಞವೇದಿಯ ಅಡಿಯಲ್ಲಿ ಹೊಯ್ಯಬೇಕು.

8ಅವನು ಪಾಪದ ಬಲಿಗಾಗಿರುವ ಹೋರಿಯ ಎಲ್ಲಾ ಕೊಬ್ಬನ್ನು ಅದರಿಂದ ತೆಗೆಯಬೇಕು; ಕರುಳುಗಳನ್ನು ಮುಚ್ಚುವ ಕೊಬ್ಬನ್ನೂ ಕರುಳುಗಳ ಮೇಲಿರುವ ಎಲ್ಲಾ ಕೊಬ್ಬನ್ನೂ

ಯಾಜಕಕಾಂಡ 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी