ಯೆಹೋಶುವ 10:20

ಯೆಹೋಶುವನೂ ಇಸ್ರಾಯೇಲ್‌ ಮಕ್ಕಳೂ ಅವರನ್ನು ಕೊಲ್ಲುವ ವರೆಗೂ ದೊಡ್ಡ ಸಂಹಾರದಿಂದ ಸಂಹರಿಸಿಬಿಟ್ಟ ತರುವಾಯ ಅವರಲ್ಲಿ ಉಳಿದವರು ಕೋಟೆಗಳುಳ್ಳ ಪಟ್ಟಣಗಳಲ್ಲಿ ಸೇರಿದರು.

ಸಂದರ್ಭದೊಂದಿಗೆ ಓದಿ · ಯೆಹೋಶುವ 10

18ಆಗ ಯೆಹೋಶು ವನು--ದೊಡ್ಡ ಕಲ್ಲುಗಳನ್ನು ಗವಿಯ ಬಾಯಿಗೆ ಉರುಳಿಸಿರಿ, ಆ ಸ್ಥಳದಲ್ಲಿ ಅವರನ್ನು ಕಾಯುವಂತೆ ಮನುಷ್ಯರನ್ನು ಇಡಿರಿ.

19ನೀವು ನಿಲ್ಲಬೇಡಿರಿ, ನಿಮ್ಮ ಶತ್ರುಗಳನ್ನು ಹಿಂದಟ್ಟಿರಿ, ಹಿಂದಾದ ವೈರಿಗಳನ್ನು ಸಂಹರಿಸಿರಿ. ತಮ್ಮ ಪಟ್ಟಣಗಳಲ್ಲಿ ಪ್ರವೇಶಿಸದಂತೆ ಮಾಡಿರಿ; ಯಾಕಂದರೆ ನಿಮ್ಮ ದೇವರಾದ ಕರ್ತನು ಅವರನ್ನು ನಿಮ್ಮ ಕೈಗೆ ಒಪ್ಪಿಸಿಕೊಟ್ಟಿದ್ದಾನೆ ಅಂದನು.

20ಯೆಹೋಶುವನೂ ಇಸ್ರಾಯೇಲ್‌ ಮಕ್ಕಳೂ ಅವರನ್ನು ಕೊಲ್ಲುವ ವರೆಗೂ ದೊಡ್ಡ ಸಂಹಾರದಿಂದ ಸಂಹರಿಸಿಬಿಟ್ಟ ತರುವಾಯ ಅವರಲ್ಲಿ ಉಳಿದವರು ಕೋಟೆಗಳುಳ್ಳ ಪಟ್ಟಣಗಳಲ್ಲಿ ಸೇರಿದರು.

21ಜನರೆಲ್ಲಾ ಮಕ್ಕೇದದಲ್ಲಿರುವ ಪಾಳೆಯಕ್ಕೆ ಯೆಹೋಶುವನ ಬಳಿಗೆ ಸಮಾಧಾನದಿಂದ ಹಿಂತಿರುಗಿ ಬಂದರು; ಇಸ್ರಾಯೇಲ್‌ ಮಕ್ಕಳಿಗೆ ವಿರೋಧವಾಗಿ ಒಬ್ಬನೂ ತನ್ನ ನಾಲಿಗೆಯನ್ನು ಅಲ್ಲಾಡಿಸಲಿಲ್ಲ.

22ಆಗ ಯೆಹೋಶುವನು--ನೀವು ಗವಿಯ ಬಾಯಿಯನ್ನು ತೆರೆದು ಆ ಐದು ಮಂದಿ ಅರಸುಗಳನ್ನು ಗವಿಯೊಳಗಿಂದ ನನ್ನ ಬಳಿಗೆ ಹೊರಗೆ ತನ್ನಿರಿ ಅಂದನು.

ಯೆಹೋಶುವ 10 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी