೧ ಯೋಹಾನನು 5:7

ಪರಲೋಕದಲ್ಲಿ ಸಾಕ್ಷಿಕೊಡುವವರು ಮೂವರಿದ್ದಾರೆ; ಅವರು ಯಾರಂದರೆ ತಂದೆಯು, ವಾಕ್ಯವು ಮತ್ತು ಪರಿಶುದ್ಧಾತ್ಮನು; ಮೂವರಾಗಿರುವ ಇವರು ಒಂದಾಗಿದ್ದಾರೆ.

ಸಂದರ್ಭದೊಂದಿಗೆ ಓದಿ · ೧ ಯೋಹಾನನು 5

5ಯೇಸುವು ದೇವರ ಮಗನೆಂದು ನಂಬಿದವನೇ ಅಲ್ಲದೆ ಲೋಕವನ್ನು ಜಯಿಸುವವನು ಯಾರು?

6ಈತನೇ ಅಂದರೆ ಯೇಸು ಕ್ರಿಸ್ತನೇ ನೀರಿನಿಂದಲೂ ರಕ್ತದಿಂದಲೂ ಬಂದಾತನು; ನೀರಿನಿಂದ ಮಾತ್ರವಲ್ಲದೆ ನೀರಿನಿಂದಲೂ ರಕ್ತದಿಂದಲೂ ಬಂದನು; ಇದಕ್ಕೆ ಸಾಕ್ಷಿಕೊಡುವಾತನು ಆತ್ಮನೇ; ಯಾಕಂದರೆ ಆತ್ಮನು ಸತ್ಯವಾಗಿದ್ದಾನೆ.

7ಪರಲೋಕದಲ್ಲಿ ಸಾಕ್ಷಿಕೊಡುವವರು ಮೂವರಿದ್ದಾರೆ; ಅವರು ಯಾರಂದರೆ ತಂದೆಯು, ವಾಕ್ಯವು ಮತ್ತು ಪರಿಶುದ್ಧಾತ್ಮನು; ಮೂವರಾಗಿರುವ ಇವರು ಒಂದಾಗಿದ್ದಾರೆ.

8ಆತ್ಮ ನೀರು ರಕ್ತ ಈ ಮೂವರು ಭೂಮಿಯ ಮೇಲೆ ಸಾಕ್ಷಿ ಹೇಳುತ್ತಾರೆ; ಈ ಮೂವರು ಒಂದೇಯಾಗಿ ಒಪ್ಪಿಕೊಳ್ಳುತ್ತಾರೆ.

9ನಾವು ಮನುಷ್ಯರ ಸಾಕ್ಷಿಯನ್ನು ತೆಗೆದುಕೊಳ್ಳುವದಾದರೆ ದೇವರ ಸಾಕ್ಷಿಯು ಅದಕ್ಕಿಂತ ದೊಡ್ಡದಾಗಿದೆಯಲ್ಲಾ. ಯಾಕಂದರೆ ತನ್ನ ಮಗನ ವಿಷಯದಲ್ಲಿ ದೇವರು ಕೊಟ್ಟ ಸಾಕ್ಷಿಯು ಇದೇ ಆಗಿದೆ.

೧ ಯೋಹಾನನು 5 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी