೨ ಅರಸುಗಳು 7:17

ಅರಸನಿಗೆ ಹಸ್ತಕನಾದ ಆ ಅಧಿಕಾರಿಯನ್ನು ಅರಸನು ಪಟ್ಟಣದ ಬಾಗಲಿನ ಕಾವಲಿಗೆ ನೇಮಿಸಿದ್ದನು. ಅರಸನು ದೇವರ ಮನುಷ್ಯನ ಬಳಿಗೆ ಬಂದಾಗ ದೇವರ ಮನು ಷ್ಯನು ಹೇಳಿದ್ದ ಪ್ರಕಾರವೇ ಜನರು ಅವನನ್ನು ಪಟ್ಟ ಣದ ಬಾಗಲಲ್ಲಿ ತುಳಿದು ಹಾಕಿದ್ದರಿಂದ ಅವನು ಸತ್ತುಹೋದನು.

ಸಂದರ್ಭದೊಂದಿಗೆ ಓದಿ · ೨ ಅರಸುಗಳು 7

15ಅವರು ಅವರ ಹಿಂದೆ ಯೊರ್ದನಿನ ವರೆಗೆ ಹೋದರು. ಇಗೋ, ಮಾರ್ಗದಲ್ಲೆಲ್ಲಾ ಅರಾಮ್ಯರು ಬಹು ಅವಸರದಿಂದ ಬಿಸಾಡಿದ ವಸ್ತ್ರಗಳೂ ಪಾತ್ರೆ ಗಳೂ ತುಂಬಿದ್ದನ್ನು ದೂತರು ತಿರಿಗಿ ಬಂದು ಅರಸ ನಿಗೆ ತಿಳಿಸಿದರು.

16ಆಗ ಜನರು ಹೊರಟುಹೋಗಿ ಅರಾಮ್ಯರ ಡೇರೆಗಳನ್ನು ಸುಲುಕೊಂಡರು. ಆದದ ರಿಂದ ಕರ್ತನ ವಾಕ್ಯದ ಪ್ರಕಾರವೇ ಒಂದು ಸೇರು ನಯವಾದ ಹಿಟ್ಟು ಒಂದು ಶೇಕೆಲಿಗೂ ಎರಡು ಸೇರು ಜವೆಗೋದಿಯು ಒಂದು ಶೇಕೆಲಿಗೂ ಮಾರಲ್ಪಟ್ಟಿತು.

17ಅರಸನಿಗೆ ಹಸ್ತಕನಾದ ಆ ಅಧಿಕಾರಿಯನ್ನು ಅರಸನು ಪಟ್ಟಣದ ಬಾಗಲಿನ ಕಾವಲಿಗೆ ನೇಮಿಸಿದ್ದನು. ಅರಸನು ದೇವರ ಮನುಷ್ಯನ ಬಳಿಗೆ ಬಂದಾಗ ದೇವರ ಮನು ಷ್ಯನು ಹೇಳಿದ್ದ ಪ್ರಕಾರವೇ ಜನರು ಅವನನ್ನು ಪಟ್ಟ ಣದ ಬಾಗಲಲ್ಲಿ ತುಳಿದು ಹಾಕಿದ್ದರಿಂದ ಅವನು ಸತ್ತುಹೋದನು.

18ಹಾಗೆಯೇ--ಎರಡು ಸೇರು ಜವೆ ಗೋದಿಯು ಒಂದು ಶೇಕೆಲಿಗೂ ಒಂದು ಸೇರು ನಯವಾದ ಹಿಟ್ಟು ಒಂದು ಶೇಕೆಲಿಗೂ ನಾಳೆ ಇಷ್ಟು ಹೊತ್ತಿಗೆ ಸಮಾರ್ಯದ ಬಾಗಲಲ್ಲಿ ಮಾರಲ್ಪಡುವ ವೆಂದು ದೇವರ ಮನುಷ್ಯನು ಅರಸನಿಗೆ ಹೇಳಿದ ಪ್ರಕಾರವೇ ಸಂಭವಿಸಿತು.

19ಆ ಅಧಿಕಾರಿ ದೇವರ ಮನುಷ್ಯನಿಗೆ ಪ್ರತ್ಯುತ್ತರವಾಗಿ--ಇಗೋ, ಕರ್ತನು ಆಕಾಶದಲ್ಲಿ ಕಿಟಕಿಗಳನ್ನು ಉಂಟುಮಾಡಿದರೂ ಹಾಗಾ ಗುವದೋ ಅಂದನು; ಅದಕ್ಕವನು--ಇಗೋ, ನೀನು ನಿನ್ನ ಕಣ್ಣುಗಳಿಂದ ನೋಡುವಿ; ಆದರೆ ಅದನ್ನು ತಿನ್ನು ವದಿಲ್ಲ ಎಂದು ಹೇಳಿದ್ದನು.

೨ ಅರಸುಗಳು 7 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी