ಜೆಕರ್ಯ 3:8

ಪ್ರಧಾನ ಯಾಜಕ ನಾದ ಓ ಯೆಹೋಶುವನೇ, ನೀನೂ ನಿನ್ನ ಮುಂದೆ ಕೂತುಕೊಳ್ಳುವ ನಿನ್ನ ಸಂಗಡಿಗರೂ ಈಗ ಕೇಳಿರಿ; ಅವರು ಆಶ್ಚರ್ಯವನ್ನುಂಟು ಮಾಡುವ ಮನುಷ್ಯರಾಗಿ ದ್ದಾರೆ; ಇಗೋ, ನಾನು ಕೊಂಬೆಯೆಂಬ ನನ್ನ ಸೇವಕ ನನ್ನು ಬರಮಾಡುವೆನು.

ಸಂದರ್ಭದೊಂದಿಗೆ ಓದಿ · ಜೆಕರ್ಯ 3

6ಆಗ ಕರ್ತನ ದೂತನು ಯೆಹೋ ಶುವನಿಗೆ ಸಾಕ್ಷಿ ಕೊಟ್ಟದ್ದೇನಂದರೆ--

7ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನೀನು ನನ್ನ ಮಾರ್ಗಗಳಲ್ಲಿ ನಡೆದು ನನ್ನ ಆಜ್ಞೆಯನ್ನು ಕೈಕೋ, ಆಗ ನೀನು ನನ್ನ ಮನೆಗೂ ನ್ಯಾಯತೀರಿಸಿ ನನ್ನ ಅಂಗಳಗಳನ್ನೂ ಕಾಯುವಿ; ಇಲ್ಲಿ ನಿಂತವರ ಬಳಿಯಲ್ಲಿ ನಡೆದಾಡುವ ನಿನಗೆ ಸ್ಥಳಗಳನ್ನು ಕೊಡುವೆನು.

8ಪ್ರಧಾನ ಯಾಜಕ ನಾದ ಓ ಯೆಹೋಶುವನೇ, ನೀನೂ ನಿನ್ನ ಮುಂದೆ ಕೂತುಕೊಳ್ಳುವ ನಿನ್ನ ಸಂಗಡಿಗರೂ ಈಗ ಕೇಳಿರಿ; ಅವರು ಆಶ್ಚರ್ಯವನ್ನುಂಟು ಮಾಡುವ ಮನುಷ್ಯರಾಗಿ ದ್ದಾರೆ; ಇಗೋ, ನಾನು ಕೊಂಬೆಯೆಂಬ ನನ್ನ ಸೇವಕ ನನ್ನು ಬರಮಾಡುವೆನು.

9ನಾನು ಯೆಹೋಶುವನ ಮುಂದೆ ಇಟ್ಟಿರುವ ಕಲ್ಲನ್ನು ನೋಡು. ಒಂದು ಕಲ್ಲಿನ ಮೇಲೆ ಏಳು ಕಣ್ಣುಗಳು ಇರುವವು; ಇಗೋ, ನಾನು ಅದರ ಕೆತ್ತನೆಯಿಂದ ಕೆತ್ತುವೆನು; ಆ ದೇಶದ ಅಪರಾಧ ವನ್ನು ಒಂದೇ ದಿನದಲ್ಲಿ ತೊಲಗಿಸುವೆನು ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ.

10ಆ ದಿನದಲ್ಲಿ ನೀವು ನಿಮ್ಮ ನಿಮ್ಮ ನೆರೆಯವರನ್ನು ದ್ರಾಕ್ಷೇಬಳ್ಳಿಯ ಕೆಳಗೂ ಅಂಜೂರ ಮರದ ಕೆಳಗೂ ಕರೆಯುವಿರಿ ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ.

ಜೆಕರ್ಯ 3 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी