ವಿಮೋಚನಕಾಂಡ 13:4

ಅಬೀಬ್‌ ತಿಂಗಳಿನ ಈ ದಿನದಲ್ಲಿ ನೀವು ಹೊರಗೆ ಬಂದಿದ್ದೀರಿ.

ಸಂದರ್ಭದೊಂದಿಗೆ ಓದಿ · ವಿಮೋಚನಕಾಂಡ 13

2ಇಸ್ರಾಯೇಲ್‌ ಮಕ್ಕಳಲ್ಲಿ ಗಂಡಸರಲ್ಲಿಯೂ ಪಶುಗಳಲ್ಲಿಯೂ ಗರ್ಭ ತೆರೆಯುವ ಚೊಚ್ಚಲಾದದ್ದನ್ನೆಲ್ಲಾ ನನಗಾಗಿ ಪರಿಶುದ್ಧ ಮಾಡು; ಅದು ನನ್ನದೇ ಅಂದನು.

3ಆಗ ಮೋಶೆಯು ಜನರಿಗೆ--ನೀವು ಐಗುಪ್ತದ ದಾಸತ್ವದ ಮನೆಯಿಂದ ಹೊರಬಂದ ಈ ದಿನವನ್ನು ಜ್ಞಾಪಕಮಾಡಿಕೊಳ್ಳಿರಿ. ಯಾಕಂದರೆ ಕರ್ತನು ತನ್ನ ಬಲವಾದ ಕೈಯಿಂದ ನಿಮ್ಮನ್ನು ಅಲ್ಲಿಂದ ಹೊರಗೆ ಬರಮಾಡಿದ್ದಾನೆ. ಹೀಗಿರುವದರಿಂದ ಅಂದು ನೀವು ಹುಳಿ ರೊಟ್ಟಿಯನ್ನು ತಿನ್ನಬಾರದು.

4ಅಬೀಬ್‌ ತಿಂಗಳಿನ ಈ ದಿನದಲ್ಲಿ ನೀವು ಹೊರಗೆ ಬಂದಿದ್ದೀರಿ.

5ಆದದ ರಿಂದ ನಿನಗೆ ಕೊಡುತ್ತೇನೆಂದು ನಿನ್ನ ಪಿತೃಗಳಿಗೆ ಪ್ರಮಾಣಮಾಡಿದ ದೇಶಕ್ಕೆ ಅಂದರೆ ಕಾನಾನ್ಯರ ಹಿತ್ತಿಯರ ಅಮೋರಿಯರ ಹಿವ್ವಿಯರ ಯೆಬೂಸಿಯರ ಹಾಲೂ ಜೇನೂ ಹರಿಯುವ ದೇಶಕ್ಕೆ ನಿನ್ನನ್ನು ಕರೆ ತಂದಾಗ ಈ ಆಚರಣೆಯನ್ನು ಈ ತಿಂಗಳಲ್ಲಿ ಆಚರಿಸ ಬೇಕು.

6ಹುಳಿಯಿಲ್ಲದ ರೊಟ್ಟಿಯನ್ನು ಏಳು ದಿವಸ ತಿನ್ನಬೇಕು. ಏಳನೆಯ ದಿನದಲ್ಲಿ ಕರ್ತನಿಗೆ ಹಬ್ಬವನ್ನಾಚ ರಿಸಬೇಕು.

ವಿಮೋಚನಕಾಂಡ 13 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी