ಯೆಶಾಯ 58:5

ನಾನು ಆರಿಸಿಕೊಂಡದ್ದು ಇಂಥಾ ಉಪವಾಸವೋ? ಜೊಂಡಿನಂತೆ ತಲೆಯನ್ನು ಬೊಗ್ಗಿಸಿಕೊಂಡು ಗೋಣೀ ತಟ್ಟನ್ನೂ ಬೂದಿಯನ್ನೂ ಆಸನ ಮಾಡಿಕೊಂಡು ಕೂತುಕೊಳ್ಳುವದೋ? ಇದನ್ನು ಉಪವಾಸವೆಂದು ನೀವು ಕರೆದು ಆ ದಿನದಲ್ಲಿ ಮನುಷ್ಯನು ತನ್ನ ಆತ್ಮವನ್ನು ಕುಂದಿಸುವದು ಕರ್ತನು ಮೆಚ್ಚುವ ದಿನವೆಂದು ಅನ್ನು ತ್ತೀರೋ?

ಸಂದರ್ಭದೊಂದಿಗೆ ಓದಿ · ಯೆಶಾಯ 58

3ನಾವು ಉಪವಾಸ ಮಾಡಿದ್ದೇವೆ, ನೀನು ಯಾಕೆ ನೋಡುವದಿಲ್ಲ? ನಮ್ಮ ಪ್ರಾಣವನ್ನು ಕುಂದಿಸಲು ನೀನು ಗಮನಿಸದಿರುವದೇಕೆ ಎಂದು ಅವರು ಅಂದು ಕೊಳ್ಳುತ್ತಾರೆ; ಇಗೋ, ನಿಮ್ಮ ಉಪವಾಸದ ದಿನದಲ್ಲಿ ನಿಮ್ಮ ಇಷ್ಟವನ್ನು ತೀರಿಸುತ್ತೀರಿ ಮತ್ತು ನಿಮ್ಮ ಎಲ್ಲಾ ದುಡಿತವನ್ನು ನಿರ್ಬಂಧಿಸುತ್ತೀರಿ.

4ಇಗೋ, ವ್ಯಾಜ್ಯ ಕ್ಕೂ ಹೋರಾಟಕ್ಕೂ ದುಷ್ಟತ್ವದ ಮುಷ್ಟಿಯಿಂದ ಹೊಡೆಯುವದಕ್ಕೂ ನೀವು ಉಪವಾಸಮಾಡುತ್ತೀರಿ. ನಿಮ್ಮ ಸ್ವರವು ಮೇಲಕ್ಕೆ ಕೇಳಿಸುವಂತೆ ಈ ದಿವಸ ಉಪವಾಸ ಮಾಡಿದ ಹಾಗೆ ನೀವು ಮಾಡಬೇಡಿರಿ.

5ನಾನು ಆರಿಸಿಕೊಂಡದ್ದು ಇಂಥಾ ಉಪವಾಸವೋ? ಜೊಂಡಿನಂತೆ ತಲೆಯನ್ನು ಬೊಗ್ಗಿಸಿಕೊಂಡು ಗೋಣೀ ತಟ್ಟನ್ನೂ ಬೂದಿಯನ್ನೂ ಆಸನ ಮಾಡಿಕೊಂಡು ಕೂತುಕೊಳ್ಳುವದೋ? ಇದನ್ನು ಉಪವಾಸವೆಂದು ನೀವು ಕರೆದು ಆ ದಿನದಲ್ಲಿ ಮನುಷ್ಯನು ತನ್ನ ಆತ್ಮವನ್ನು ಕುಂದಿಸುವದು ಕರ್ತನು ಮೆಚ್ಚುವ ದಿನವೆಂದು ಅನ್ನು ತ್ತೀರೋ?

6ನಾನು ಆದುಕೊಳ್ಳುವ ಉಪವಾಸವು ಕೇಡಿನ ಬಂಧನಗಳನ್ನು ಬಿಚ್ಚುವದೂ ಭಾರವಾದ ಹೊರೆಯನ್ನು ಬಿಚ್ಚುವದೂ ಹಿಂಸಿಸಲ್ಪಟ್ಟವರು ಬಿಡಿಸ ಲ್ಪಟ್ಟವರಾಗಿ ಹಾಕುವದೂ ಆಗಿದೆಯಲ್ಲವೋ?

7ನಿನ್ನ ರೊಟ್ಟಿಯನ್ನು ಹಸಿದವರಿಗೆ ಹಂಚುವದೂ ಅಲೆಯು ತ್ತಿರುವ ಬಡವರನ್ನು ನಿನ್ನ ಮನೆಗೆ ಬರಮಾಡಿ ಕೊಳ್ಳುವದೂ ಬೆತ್ತಲೆಯವರನ್ನು ಕಂಡಾಗೆಲ್ಲ ಅವರಿಗೆ ಹೊದಿಸುವದೂ ನಿನ್ನ ಸ್ವಂತ ಶರೀರದಂತಿರುವವ ನಿಗೆ ನಿನ್ನನ್ನು ಮರೆಮಾಡಿಕೊಳ್ಳದಿರುವದೂ ಇದೇ ಅಲ್ಲವೋ?

ಯೆಶಾಯ 58 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी