ಕೇಳಿದರೂ ಸರಿ, ಕೇಳದಿದ್ದರೂ ಸರಿ; ನೀನು ನನ್ನ ಮಾತುಗಳನ್ನು ಅವರಿಗೆ ಹೇಳಬೇಕು; ಅವರು ಖಂಡಿತವಾಗಿಯೂ ತಿರುಗಿಬೀಳುವವರೇ.
5ಅವರು ಕೇಳಲಿ ಅಥವಾ ಕೇಳದಿರಲಿ (ಅವರು ತಿರುಗಿಬೀಳುವ ಮನೆಯವರು); ಆದರೆ ತಮ್ಮೊಳಗೆ ಒಬ್ಬ ಪ್ರವಾದಿ ಇರುವನೆಂದು ತಿಳಿದು ಕೊಂಡರೆ ಸಾಕು.
6ಇದಲ್ಲದೆ ಮನುಷ್ಯಪುತ್ರನೇ, ನೀನು ಅವರಿಗಾ ಗಲೀ ಅವರ ಮಾತುಗಳಿಗಾಗಲೀ ಭಯಪಡಬೇಡ. ಮುಳ್ಳುಗಳೂ ದತ್ತೂರಿಗಳೂ ನಿನ್ನ ಸಂಗಡ ಇದ್ದರೂ ಚೇಳುಗಳ ನಡುವೆ ನೀನು ವಾಸಿಸಿದರೂ ಸರಿ; ನೀನು ಅವರ ಮಾತುಗಳಿಗೆ ಭಯಪಡಬೇಡ, ಅವರು ತಿರುಗಿ ಬೀಳುವ ಮನೆಯವರಾದರೂ ಅವರ ನೋಟಗಳಿಗೆ ಅಂಜಬೇಡ.
7ಕೇಳಿದರೂ ಸರಿ, ಕೇಳದಿದ್ದರೂ ಸರಿ; ನೀನು ನನ್ನ ಮಾತುಗಳನ್ನು ಅವರಿಗೆ ಹೇಳಬೇಕು; ಅವರು ಖಂಡಿತವಾಗಿಯೂ ತಿರುಗಿಬೀಳುವವರೇ.
8ಮನುಷ್ಯಪುತ್ರನೇ, ನೀನಾದರೋ ನಾನು ಹೇಳುವ ದನ್ನು ಕೇಳು; ಆ ತಿರುಗಿಬೀಳುವವರ ಮನೆಯ ಹಾಗೆ ನೀನೂ ತಿರುಗಿಬೀಳಬೇಡ; ನಿನ್ನ ಬಾಯನ್ನು ತೆರೆದು ನಾನು ನಿನಗೆ ಕೊಡುವದನ್ನು ತಿನ್ನು ಅಂದನು.
9ನಾನು ನೋಡಿದಾಗ ಇಗೋ, ಅದರಲ್ಲಿ ಒಂದು ಪುಸ್ತಕದ ಸುರಳಿ ಇತ್ತು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ