ಯೆಹೆಜ್ಕೇಲನು 40:19

ಆಗ ಅವನು ಕೆಳಗಿನ ಬಾಗಲಿನ ಮುಂದುಗಡೆಯಿಂದ ಒಳಗಿನ ಅಂಗಳದ ಹೊರಗಡೆಯ ವರೆಗೂ ಪೂರ್ವಕ್ಕೂ ಉತ್ತರಕ್ಕೂ ಇರುವ ಅಗಲವನ್ನು ನೂರು ಮೊಳವೆಂದು ಅಳೆದನು.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 40

17ಆಗ ಅವನು ನನ್ನನ್ನು ಹೊರಗಿನ ಅಂಗಳಕ್ಕೆ ತಂದನು; ಇಗೋ, ಕೊಠಡಿಗಳೂ ಕಲ್ಲು ಹಾಸಿದ ನೆಲವೂ ಅಂಗಳದ ಸುತ್ತಲೂ ಮಾಡಲ್ಪಟ್ಟಿದ್ದವು; ಕಲ್ಲು ಹಾಸಿದ ನೆಲದ ಬದಿಯಲ್ಲಿ ಮೂವತ್ತು ಕೊಠಡಿ ಗಳಿದ್ದವು.

18ಬಾಗಲುಗಳ ಪಾರ್ಶ್ವದಲ್ಲಿ ಬಾಗಲುಗಳ ಉದ್ದಕ್ಕೆ ಸರಿಯಾಗಿ ಇದ್ದ ಆ ಕಲ್ಲು ಹಾಸಿದನೆಲವು ಕೆಳಗಿನ ನೆಲಗಟ್ಟಾಗಿತ್ತು.

19ಆಗ ಅವನು ಕೆಳಗಿನ ಬಾಗಲಿನ ಮುಂದುಗಡೆಯಿಂದ ಒಳಗಿನ ಅಂಗಳದ ಹೊರಗಡೆಯ ವರೆಗೂ ಪೂರ್ವಕ್ಕೂ ಉತ್ತರಕ್ಕೂ ಇರುವ ಅಗಲವನ್ನು ನೂರು ಮೊಳವೆಂದು ಅಳೆದನು.

20ಇದಲ್ಲದೆ ಉತ್ತರದ ಕಡೆಗೆ ಅಭಿಮುಖವಾದ ಹೊರ ಗಿನ ಬಾಗಲಿನ ಉದ್ದವನ್ನೂ ಅಗಲವನ್ನೂ ಅಳೆದನು.

21ಅದರ ಚಿಕ್ಕ ಕೊಠಡಿಗಳು ಈ ಕಡೆಗೂ ಆ ಕಡೆಗೂ ಮೂರು ಮೂರು ಇದ್ದವು; ಅದರ ಕಂಬಗಳು ಕೈಸಾಲೆ ಗಳು ಮೊದಲನೇ ಭಾಗಲಿನ ಅಳತೆಯ ಹಾಗಿದ್ದವು; ಅದರ ಉದ್ದ ಐವತ್ತು ಮೊಳ ಅಗಲ ಇಪ್ಪತ್ತೈದು ಮೊಳ.

ಯೆಹೆಜ್ಕೇಲನು 40 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी