ಯೆರೆಮಿಯ 2:2

ನೀನು ಹೋಗಿ ಯೆರೂಸಲೇಮಿನ ಕಿವಿಗಳಲ್ಲಿ ಕೂಗಿ ಹೇಳ ಬೇಕಾದದ್ದೇನಂದರೆ, ಕರ್ತನು ಹೀಗೆ ಹೇಳುತ್ತಾನೆ --ನಾನು ನಿನ್ನನ್ನು ನಿನ್ನ ಯೌವನದ ವಾತ್ಸಲ್ಯವನ್ನೂ ನಿನ್ನ ನಿಶ್ಚಿತಾರ್ಥದ ಪ್ರೀತಿಯನ್ನೂ ನೀನು ಅರಣ್ಯದಲ್ಲಿ ಬಿತ್ತಲ್ಪಡದ ದೇಶದಲ್ಲಿ ನನ್ನನ್ನು ಹಿಂಬಾಲಿಸಿದ್ದನ್ನೂ ಜ್ಞಾಪಕಮಾಡಿಕೊಳ್ಳುತ್ತೇನೆ.

ಸಂದರ್ಭದೊಂದಿಗೆ ಓದಿ · ಯೆರೆಮಿಯ 2

1ಇದಲ್ಲದೆ ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನಂದರೆ--

2ನೀನು ಹೋಗಿ ಯೆರೂಸಲೇಮಿನ ಕಿವಿಗಳಲ್ಲಿ ಕೂಗಿ ಹೇಳ ಬೇಕಾದದ್ದೇನಂದರೆ, ಕರ್ತನು ಹೀಗೆ ಹೇಳುತ್ತಾನೆ --ನಾನು ನಿನ್ನನ್ನು ನಿನ್ನ ಯೌವನದ ವಾತ್ಸಲ್ಯವನ್ನೂ ನಿನ್ನ ನಿಶ್ಚಿತಾರ್ಥದ ಪ್ರೀತಿಯನ್ನೂ ನೀನು ಅರಣ್ಯದಲ್ಲಿ ಬಿತ್ತಲ್ಪಡದ ದೇಶದಲ್ಲಿ ನನ್ನನ್ನು ಹಿಂಬಾಲಿಸಿದ್ದನ್ನೂ ಜ್ಞಾಪಕಮಾಡಿಕೊಳ್ಳುತ್ತೇನೆ.

3ಇಸ್ರಾಯೇಲು ಕರ್ತನಿಗೆ ಪರಿಶುದ್ಧವೂ ಆತನ ಹುಟ್ಟುವಳಿಯ ಪ್ರಥಮ ಫಲವೂ ಆಗಿತ್ತು; ಅದನ್ನು ತಿಂದುಬಿಟ್ಟವರೆಲ್ಲರೂ ಅಪರಾಧಿ ಗಳಾಗುವರು; ಅವರಿಗೆ ಕೇಡು ಬರುವದೆಂದು ಕರ್ತನು ಅನ್ನುತ್ತಾನೆ.

4ಓ ಯಾಕೋಬಿನ ಮನೆತನವೇ, ಇಸ್ರಾಯೇಲಿನ ಮನೆತನದ ಎಲ್ಲಾ ಕುಟುಂಬಗಳೇ, ಕರ್ತನ ವಾಕ್ಯವನ್ನು ನೀವು ಕೇಳಿರಿ.

ಯೆರೆಮಿಯ 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी