ಅವರೊಳಗೆ ನೀವು ಸಹ ಯೇಸು ಕ್ರಿಸ್ತನವರಾಗಿರುವ ದಕ್ಕಾಗಿ ಕರೆಯಲ್ಪಟ್ಟಿದ್ದೀರಿ.
4ಪರಿಶುದ್ಧ ಆತ್ಮಕ್ಕನು ಸಾರವಾಗಿ ಸತ್ತವರೊಳ ಗಿಂದ ಪುನರುತ್ಥಾನ ಹೊಂದುವದರ ಮೂಲಕ ಆತನು ದೇವಕುಮಾರನೆಂದು ಬಲದೊಂದಿಗೆ ಪ್ರಕಟಿಸಲ್ಪ ಟ್ಟನು;
5ಆತನ ಹೆಸರಿಗಾಗಿ ಎಲ್ಲಾ ಜನಾಂಗಗಳವರು ನಂಬಿಕೆಗೆ ವಿಧೇಯರಾಗುವಂತೆ ಆತನಿಂದ ನಾವು ಕೃಪೆಯನ್ನೂ ಅಪೊಸ್ತಲತನವನ್ನೂ ಹೊಂದಿದ್ದೇವೆ.
6ಅವರೊಳಗೆ ನೀವು ಸಹ ಯೇಸು ಕ್ರಿಸ್ತನವರಾಗಿರುವ ದಕ್ಕಾಗಿ ಕರೆಯಲ್ಪಟ್ಟಿದ್ದೀರಿ.
7ಇದಲ್ಲದೆ ದೇವರಿಗೆ ಪ್ರಿಯ ರಾಗಿದ್ದು ಪರಿಶುದ್ಧರಾಗುವದಕ್ಕೆ ಕರೆಯಲ್ಪಟ್ಟ ರೋಮ್ ನಲ್ಲಿರುವವರೆಲ್ಲರಿಗೆ ನಮ್ಮ ತಂದೆಯಾದ ದೇವ ರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಸಮಾಧಾನವೂ ಉಂಟಾಗಲಿ.
8ಮೊದಲನೆಯದಾಗಿ ನಿಮ್ಮ ನಂಬಿಕೆಯು ಲೋಕ ದಲ್ಲೆಲ್ಲಾ ಪ್ರಸಿದ್ಧವಾದದರಿಂದ ನಿಮ್ಮೆಲ್ಲರ ವಿಷಯವಾಗಿ ಯೇಸು ಕ್ರಿಸ್ತನ ಮುಖಾಂತರ ನಾನು ನನ್ನ ದೇವರಿಗೆ ಸ್ತೋತ್ರಸಲ್ಲಿಸುತ್ತೇನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ