ಯೆಶಾಯ 15:2

ಬಯಿತ್‌ ಮತ್ತು ದೀಬೋನಿನವನು ಎತ್ತರವಾದ ಸ್ಥಳಗಳಿಗೆ ಅಳುವದಕ್ಕಾಗಿ ಹೋಗಿದ್ದಾನೆ; ನೆಬೋವಿಗೋಸ್ಕರವೂ ಮೇದೆಬಕ್ಕೋಸ್ಕರವೂ ಮೋವಾಬು ಗೋಳಾಡುತ್ತದೆ. ಅವರೆಲ್ಲರ ತಲೆಗಳೆಲ್ಲಾ ಬೋಳಾಗಿರುವವು, ಪ್ರತಿ ಯೊಬ್ಬರ ಗಡ್ಡವು ಕತ್ತರಿಸಿಹಾಕಲ್ಪಡುವದು.

ಸಂದರ್ಭದೊಂದಿಗೆ ಓದಿ · ಯೆಶಾಯ 15

1ಮೋವಾಬಿನ ವಿಷಯವಾದ ದೈವೋಕ್ತಿ. ಆ ರಾತ್ರಿಯಲ್ಲಿ ಮೋವಾಬಿನ ಆರ್‌ ಹಾಳಾಗಿ ನಿಶ್ಯಬ್ದವಾಯಿತು; ಆ ರಾತ್ರಿಯಲ್ಲಿ ಮೋವಾ ಬಿನ ಕಿರ್‌ ಹಾಳಾಗಿ ನಿಶ್ಯಬ್ಧವಾಯಿತು

2ಬಯಿತ್‌ ಮತ್ತು ದೀಬೋನಿನವನು ಎತ್ತರವಾದ ಸ್ಥಳಗಳಿಗೆ ಅಳುವದಕ್ಕಾಗಿ ಹೋಗಿದ್ದಾನೆ; ನೆಬೋವಿಗೋಸ್ಕರವೂ ಮೇದೆಬಕ್ಕೋಸ್ಕರವೂ ಮೋವಾಬು ಗೋಳಾಡುತ್ತದೆ. ಅವರೆಲ್ಲರ ತಲೆಗಳೆಲ್ಲಾ ಬೋಳಾಗಿರುವವು, ಪ್ರತಿ ಯೊಬ್ಬರ ಗಡ್ಡವು ಕತ್ತರಿಸಿಹಾಕಲ್ಪಡುವದು.

3ಅವರು ತಮ್ಮ ಬೀದಿಗಳಲ್ಲಿ ಗೋಣೀತಟ್ಟನ್ನು ತಾವೇ ಸುತ್ತಿ ಕೊಳ್ಳುವರು; ಪ್ರತಿಯೊಬ್ಬನು ತಮ್ಮ ಮನೆಗಳ ಮೇಲೆ ಯೂ ಬೀದಿಗಳಲ್ಲಿಯೂ ಅರಚುತ್ತಾ ಬಹುಶೋಕ ದಿಂದ ಗೋಳಾಡುವನು.

4ಹೆಷ್ಬೋನ್‌ ಮತ್ತು ಎಲೆ ಯಾಲೆ ಕೂಗುತ್ತವೆ; ಅವುಗಳ ಸ್ವರವು ಯಹಜಿನ ವರೆಗೂ ಕೇಳಿಸುತ್ತದೆ; ಆದಕಾರಣ ಮೋವಾಬಿನ ಯುದ್ಧಭಟರು ಕಿರಿಚಿಕೊಳ್ಳುವರು; ಅವನ ಪ್ರಾಣವು ತನ್ನೊಳಗೆ ತತ್ತರಿಸುತ್ತದೆ.

ಯೆಶಾಯ 15 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी