ದಾನಿಯೇಲನು 9:24

ಅಕ್ರಮಗಳನ್ನು ಮುಗಿಸುವದಕ್ಕೂ ಪಾಪಗಳನ್ನು ಮುಚ್ಚುವದಕ್ಕೂ ಅಪರಾಧಗಳಿಗೆ ಪ್ರಾಯಶ್ಚಿತ್ತ ಮಾಡು ವದಕ್ಕೂ ನಿತ್ಯವಾದ ನೀತಿಯನ್ನು ಬರಮಾಡುವದಕ್ಕೂ ಆ ದರ್ಶನಕ್ಕೂ ಪ್ರವಾದಿಗೂ ಮುದ್ರೆಹಾಕುವದಕ್ಕೂ ಅತಿಪರಿಶುದ್ಧನನ್ನು ಅಭಿಷೇಕ ಮಾಡುವದಕ್ಕೂ ನಿನ್ನ ಜನರ ಮೇಲೆಯೂ ನಿನ್ನ ಪರಿಶುದ್ಧ ಪಟ್ಟಣದ ಮೇಲೆಯೂ ಎಪ್ಪತ್ತು ವಾರಗಳು ನೇಮಿಸಲ್ಪಟ್ಟಿವೆ.

ಸಂದರ್ಭದೊಂದಿಗೆ ಓದಿ · ದಾನಿಯೇಲನು 9

22ಅವನು ನನಗೆ ತಿಳಿಸಿ ನನ್ನೊಡನೆ ಮಾತಾಡಿ ಹೇಳಿದ್ದೇನಂದರೆ--ಓ ದಾನಿಯೇಲನೇ, ನಿನಗೆ ವಿವೇಕವನ್ನೂ ಬುದ್ಧಿಯನ್ನೂ ಕೊಡುವದಕ್ಕೆ ಈಗ ನಾನು ಬಂದಿದ್ದೇನೆ.

23ನಿನ್ನ ವಿಜ್ಞಾಪನೆಯ ಆರಂಭದಲ್ಲಿಯೇ ಆಜ್ಞೆಯು ಬಂದಿತು. ಅದನ್ನು ನಿನಗೆ ತಿಳಿಸುವದಕ್ಕೆ ನಾನು ಬಂದಿದ್ದೇನೆ; ನೀನು ಅತಿಪ್ರಿಯನಾಗಿರುವಿ. ಆದದರಿಂದ ವಿಷಯ ವನ್ನು ಗ್ರಹಿಸಿಕೊಂಡು ದರ್ಶನವನ್ನು ಆಲೋಚಿಸು.

24ಅಕ್ರಮಗಳನ್ನು ಮುಗಿಸುವದಕ್ಕೂ ಪಾಪಗಳನ್ನು ಮುಚ್ಚುವದಕ್ಕೂ ಅಪರಾಧಗಳಿಗೆ ಪ್ರಾಯಶ್ಚಿತ್ತ ಮಾಡು ವದಕ್ಕೂ ನಿತ್ಯವಾದ ನೀತಿಯನ್ನು ಬರಮಾಡುವದಕ್ಕೂ ಆ ದರ್ಶನಕ್ಕೂ ಪ್ರವಾದಿಗೂ ಮುದ್ರೆಹಾಕುವದಕ್ಕೂ ಅತಿಪರಿಶುದ್ಧನನ್ನು ಅಭಿಷೇಕ ಮಾಡುವದಕ್ಕೂ ನಿನ್ನ ಜನರ ಮೇಲೆಯೂ ನಿನ್ನ ಪರಿಶುದ್ಧ ಪಟ್ಟಣದ ಮೇಲೆಯೂ ಎಪ್ಪತ್ತು ವಾರಗಳು ನೇಮಿಸಲ್ಪಟ್ಟಿವೆ.

25ಆದದರಿಂದ ನೀನು ತಿಳಿಯಬೇಕಾದದ್ದು ಏನಂದರೆ --ಯೆರೂಸಲೇಮನ್ನು ತಿರಿಗಿ ಸ್ಥಾಪಿಸಿ ಕಟ್ಟಲು ಆಜ್ಞೆ ಹೊರಡುವದು ಮೊದಲುಗೊಂಡು ಅಭಿಷಿಕ್ತನಾದ (ಮೆಸ್ಸೀಯನ) ಪ್ರಭುವಿನ ವರೆಗೂ ಏಳು ವಾರಗಳು ಕಳೆಯಬೇಕು. ಅದು ಪುನಃ ಸ್ಥಾಪಿಸಲ್ಪಟ್ಟು ಅರವತ್ತೆರಡು ವಾರಗಳು ಇರುವದು. ಅದಕ್ಕೆ ಬೀದಿಯೂ ಗೋಡೆ ಗಳೂ ಕಷ್ಟಕಾಲದಲ್ಲಿ ಕಟ್ಟಲ್ಪಡುವದು.

26ಅರವತ್ತೆರಡು ವಾರಗಳಾದ ಮೇಲೆ ಮೆಸ್ಸೀಯನು ಛೇದಿಸಲ್ಪಡುವನು. ಆದರೆ ತನಗೆ ಅಲ್ಲ; ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ ಪರಿಶುದ್ಧ ಸ್ಥಳವನ್ನೂ ನಾಶಮಾಡುವರು. ಪ್ರಳಯದಿಂದ ಅದು ಅಂತ್ಯವಾಗುವದು. ಅಂತ್ಯದ ವರೆಗೂ ಯುದ್ಧವಾಗಿ ನಾಶನಗಳು ಸಂಭವಿಸುವವು.

ದಾನಿಯೇಲನು 9 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी