ಹಾಗೆಯೇ ಅರಸನು ಸತ್ತುಹೋಗಿ ಸಮಾರ್ಯಕ್ಕೆ ತರಲ್ಪಟ್ಟಾಗ ಅವರು ಅರಸನನ್ನು ಸಮಾ ರ್ಯದಲ್ಲಿ ಹೂಣಿಟ್ಟರು.
35ಆ ದಿವಸ ಯುದ್ಧವು ಬಲವಾದದರಿಂದ ಅರಸನು ಅರಾಮ್ಯರಿಗೆದುರಾಗಿ ರಥದಲ್ಲಿಯೇ ಇದ್ದು ಸಾಯಂಕಾಲದಲ್ಲಿ ಸತ್ತುಹೋದನು; ಆದರೆ ಆ ಗಾಯದ ರಕ್ತವು ರಥದ ಮಧ್ಯದಲ್ಲಿ ಹರಿಯಿತು.
36ಸೂರ್ಯ ಮುಣುಗುವಾಗ ಪ್ರತಿ ಮನುಷ್ಯನು ತನ್ನ ತನ್ನ ಪಟ್ಟಣಕ್ಕೂ ಪ್ರತಿ ಮನುಷ್ಯನು ತನ್ನ ತನ್ನ ದೇಶಕ್ಕೂ ಹೋಗಲಿ ಎಂದು ದಂಡಿನಲ್ಲಿ ಪ್ರಕಟ ಮಾಡಲ್ಪಟ್ಟಿತು.
37ಹಾಗೆಯೇ ಅರಸನು ಸತ್ತುಹೋಗಿ ಸಮಾರ್ಯಕ್ಕೆ ತರಲ್ಪಟ್ಟಾಗ ಅವರು ಅರಸನನ್ನು ಸಮಾ ರ್ಯದಲ್ಲಿ ಹೂಣಿಟ್ಟರು.
38ಆ ರಥವು ಸಮಾರ್ಯದ ಕೆರೆಯಲ್ಲಿ ತೊಳೆಯಲ್ಪಡುವಾಗ ಕರ್ತನು ಹೇಳಿದ ವಾಕ್ಯದ ಪ್ರಕಾರವೇ ನಾಯಿಗಳು ಅವನ ರಕ್ತವನ್ನು ನೆಕ್ಕಿದವು; ಹಾಗೆಯೇ ಅವರು ಕವಚವನ್ನು ತೊಳೆದರು.
39ಆದರೆ ಅಹಾಬನ ಇತರ ಕ್ರಿಯೆಗಳೂ ಅವನು ಮಾಡಿದ್ದೆಲ್ಲವೂ ಅವನು ಕಟ್ಟಿಸಿದ ದಂತದ ಮನೆಯೂ ಎಲ್ಲಾ ಪಟ್ಟಣಗಳೂ ಇಸ್ರಾಯೇಲಿನ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ