ಯೆರೆಮಿಯ 24:8

ತಿನ್ನಕೂಡದ ಹಾಗೆ ಅಷ್ಟು ಕೆಟ್ಟವುಗಳಾಗಿರುವ ಆ ಕೆಟ್ಟ ಅಂಜೂರದ ಹಣ್ಣುಗಳ ಹಾಗೆ ನಿಶ್ಚಯವಾಗಿ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ ಅವನ ಪ್ರಧಾನರನ್ನೂ ಈ ದೇಶದಲ್ಲಿ ಉಳಿಯುವ ಯೆರೂಸಲೇಮಿನ ಶೇಷವನ್ನೂ ಐಗುಪ್ತದೇಶದಲ್ಲಿ ವಾಸಿಸುವವರನ್ನೂ ಒಪ್ಪಿಸುತ್ತೇನೆಂದು ಕರ್ತನು ಹೇಳುತ್ತಾನೆ.

ಸಂದರ್ಭದೊಂದಿಗೆ ಓದಿ · ಯೆರೆಮಿಯ 24

6ನಾನು ನನ್ನ ಕಣ್ಣುಗಳನ್ನು ಅವರ ಮೇಲೆ ಒಳ್ಳೇದಕ್ಕಾಗಿ ಇಡುವೆನು. ಈ ದೇಶಕ್ಕೆ ಅವರನ್ನು ತಿರಿಗಿ ಬರಮಾಡುವೆನು; ಕೆಡವಿ ಹಾಕದೆ ಅವರನ್ನು ಕಟ್ಟುವೆನು, ಕೀಳದೆ ಅವರನ್ನು ನೆಡುವೆನು.

7ನಾನೇ ಕರ್ತನೆಂದು ನನ್ನನ್ನು ತಿಳುಕೊಳ್ಳುವದಕ್ಕೆ ಅವರಿಗೆ ಹೃದಯವನ್ನು ಕೊಡುವೆನು. ಅವರು ನನ್ನ ಜನರಾಗಿ ರುವರು; ನಾನು ಅವರ ದೇವರಾಗಿರುವೆನು; ತಮ್ಮ ಪೂರ್ಣ ಹೃದಯದಿಂದ ನನ್ನ ಬಳಿಗೆ ಹಿಂತಿರುಗಿಕೊಳ್ಳು ವರು.

8ತಿನ್ನಕೂಡದ ಹಾಗೆ ಅಷ್ಟು ಕೆಟ್ಟವುಗಳಾಗಿರುವ ಆ ಕೆಟ್ಟ ಅಂಜೂರದ ಹಣ್ಣುಗಳ ಹಾಗೆ ನಿಶ್ಚಯವಾಗಿ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ ಅವನ ಪ್ರಧಾನರನ್ನೂ ಈ ದೇಶದಲ್ಲಿ ಉಳಿಯುವ ಯೆರೂಸಲೇಮಿನ ಶೇಷವನ್ನೂ ಐಗುಪ್ತದೇಶದಲ್ಲಿ ವಾಸಿಸುವವರನ್ನೂ ಒಪ್ಪಿಸುತ್ತೇನೆಂದು ಕರ್ತನು ಹೇಳುತ್ತಾನೆ.

9ನಾನು ಅವರನ್ನು ಓಡಿಸಿಬಿಡುವ ಎಲ್ಲಾ ಸ್ಥಳಗಳಲ್ಲಿ ನಿಂದೆಗೂ ಗಾದೆಗೂ ಹಾಸ್ಯಕ್ಕೂ ಶಾಪಕ್ಕೂ ಗುರಿಮಾಡಿ ಅವರನ್ನು ಭೂಮಿಯ ಸಮಸ್ತ ರಾಜ್ಯಗಳಿಂದ ತೆಗೆದು ಕೇಡಿಗೆ ಒಪ್ಪಿಸುವೆನು.

10ನಾನು ಅವರಿಗೂ ಅವರ ತಂದೆಗಳಿಗೂ ಕೊಟ್ಟ ದೇಶದೊಳ ಗಿಂದ ಅವರು ನಾಶವಾಗುವ ವರೆಗೂ ಕತ್ತಿಯನ್ನೂ ಕ್ಷಾಮವನ್ನೂ ಜಾಡ್ಯವನ್ನೂ ಅವರಲ್ಲಿ ಕಳುಹಿಸುವೆನು.

ಯೆರೆಮಿಯ 24 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी