ಯೆಶಾಯ 49:2

ಆತನು ನನ್ನ ಬಾಯನ್ನು ಹರಿತವಾದ ಖಡ್ಗವನ್ನಾಗಿ ಮಾಡಿ, ತನ್ನ ಕೈ ನೆರಳಿನಲ್ಲಿ ನನ್ನನ್ನು ಮರೆಯಾಗಿಟ್ಟಿದ್ದಾನೆ; ಆತನು ನುಣುಪಾದ ಬಾಣವನ್ನಾಗಿ ನನ್ನನ್ನು ರೂಪಿಸಿ ತನ್ನ ಬತ್ತಳಿಕೆಯಲ್ಲಿ ಮುಚ್ಚಿಟ್ಟಿದ್ದಾನೆ.

ಸಂದರ್ಭದೊಂದಿಗೆ ಓದಿ · ಯೆಶಾಯ 49

1ಓ ದ್ವೀಪ ನಿವಾಸಿಗಳೇ, ನನ್ನ ಮಾತನ್ನು ಕೇಳಿರಿ. ದೂರದ ಜನಗಳೇ, ಕಿವಿಗೊಡಿರಿ! ನಾನು ಗರ್ಭದಲ್ಲಿದ್ದಾಗಲೇ ಕರ್ತನು ನನ್ನನ್ನು ಕರೆ ದನು. ತಾಯಿಯ ಉದರದಲ್ಲಿದ್ದಂದಿನಿಂದಲೂ ನನ್ನ ಹೆಸರನ್ನು ಹೇಳುತ್ತಿದ್ದಾನೆ.

2ಆತನು ನನ್ನ ಬಾಯನ್ನು ಹರಿತವಾದ ಖಡ್ಗವನ್ನಾಗಿ ಮಾಡಿ, ತನ್ನ ಕೈ ನೆರಳಿನಲ್ಲಿ ನನ್ನನ್ನು ಮರೆಯಾಗಿಟ್ಟಿದ್ದಾನೆ; ಆತನು ನುಣುಪಾದ ಬಾಣವನ್ನಾಗಿ ನನ್ನನ್ನು ರೂಪಿಸಿ ತನ್ನ ಬತ್ತಳಿಕೆಯಲ್ಲಿ ಮುಚ್ಚಿಟ್ಟಿದ್ದಾನೆ.

3ಆತನು ನನಗೆ--ನೀನು ನನ್ನ ಸೇವಕನು, ನಾನು ಮಹಿಮೆ ಹೊಂದಬೇಕಾದ ಇಸ್ರಾಯೇಲೂ ಆಗಿದ್ದೀ ಎಂದು ಹೇಳಿದನು.

4ಅದಕ್ಕೆ ನಾನು--ನಾನು ಪಡುವ ಪ್ರಯಾಸವು ವ್ಯರ್ಥ, ನನ್ನ ಶಕ್ತಿಯನ್ನೆಲ್ಲಾ ನಿಷ್ಪ್ರಯೋಜನವಾಗಿಯೂ ವ್ಯರ್ಥವಾ ಗಿಯೂ ಕಳಕೊಂಡೆನೆಂದು ಹೇಳಿದೆನು. ಆದರೂ ನಿಶ್ಚಯವಾಗಿ ನನ್ನ ನ್ಯಾಯವು ಕರ್ತನ ಬಳಿಯಲ್ಲಿಯೂ ನನ್ನ ಪ್ರತಿಫಲವು ನನ್ನ ದೇವರಲ್ಲಿಯೂ ಉಂಟು.

ಯೆಶಾಯ 49 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी