ಯೋನ 4:5

ಆಗ ಯೋನನು ಪಟ್ಟಣವನ್ನು ಬಿಟ್ಟು ಅದರ ಮೂಡಣ ಕಡೆಯಲ್ಲಿ ಕೂತುಕೊಂಡು ಗುಡಿಸಲನ್ನು ಮಾಡಿಕೊಂಡು ಪಟ್ಟಣದಲ್ಲಿ ಏನಾಗುವದೆಂದು ನೋಡುವ ವರೆಗೆ ಅದರ ನೆರಳಿನಲ್ಲಿ ಕೂತುಕೊಂಡನು.

ಸಂದರ್ಭದೊಂದಿಗೆ ಓದಿ · ಯೋನ 4

3ಆದದರಿಂದ ಓ ಕರ್ತನೇ, ಈಗಲೇ ನನ್ನ ಪ್ರಾಣವನ್ನು ನನ್ನಿಂದ ತೆಗೆ; ನಾನು ಬದುಕುವ ದಕ್ಕಿಂತ ಸಾಯುವದು ಒಳ್ಳೇದು ಅಂದನು.

4ಆಗ ಕರ್ತನು -- ನೀನು ಕೋಪಮಾಡಿಕೊಳ್ಳುವದು ಒಳ್ಳೇದೋ ಎಂದು ಅವನಿಗೆ ಹೇಳಿದನು.

5ಆಗ ಯೋನನು ಪಟ್ಟಣವನ್ನು ಬಿಟ್ಟು ಅದರ ಮೂಡಣ ಕಡೆಯಲ್ಲಿ ಕೂತುಕೊಂಡು ಗುಡಿಸಲನ್ನು ಮಾಡಿಕೊಂಡು ಪಟ್ಟಣದಲ್ಲಿ ಏನಾಗುವದೆಂದು ನೋಡುವ ವರೆಗೆ ಅದರ ನೆರಳಿನಲ್ಲಿ ಕೂತುಕೊಂಡನು.

6ದೇವರಾದ ಕರ್ತನು ಒಂದು ಸೋರೇ ಗಿಡವನ್ನು ಎಬ್ಬಿಸಿ, ಅದು ಯೋನನ ಮೇಲೆ ಹಬ್ಬಿ ಬಂದು ಅವನ ತಲೆಯ ಮೇಲೆ ನೆರಳುಕೊಟ್ಟು ಅವನ ದುಃಖದಿಂದ ಅವನನ್ನು ಬಿಡಿಸುವಂತೆ ಮಾಡಿದನು: ಯೋನನು ಆ ಸೋರೇ ಗಿಡದ ವಿಷಯವಾಗಿ ಬಹಳ ಸಂತೋಷಪಟ್ಟನು.

7ಆದರೆ ಮಾರನೇ ದಿನದಲ್ಲಿ ಉದಯವಾದಾಗ ದೇವರು ಒಂದು ಹುಳವನ್ನು ಸಿದ್ಧಮಾಡಿದನು; ಅದು ಸೋರೇ ಗಿಡವನ್ನು ಒಣಗುವ ಹಾಗೆ ಹೊಡೆಯಿತು.

ಯೋನ 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी