ವಿಮೋಚನಕಾಂಡ 29:37

ಏಳು ದಿವಸ ಯಜ್ಞವೇದಿಗೋಸ್ಕರ ಪ್ರಾಯಶ್ಚಿತ್ತ ಮಾಡಿ ಅದನ್ನು ಪವಿತ್ರಮಾಡಬೇಕು. ಆಗ ಯಜ್ಞ ವೇದಿಯು ಅತಿಪರಿಶುದ್ಧವಾಗಿರುವದು. ಯಜ್ಞವೇದಿ ಯನ್ನು ಮುಟ್ಟುವದೆಲ್ಲಾ ಪವಿತ್ರವಾಗಿರಬೇಕು.

ಸಂದರ್ಭದೊಂದಿಗೆ ಓದಿ · ವಿಮೋಚನಕಾಂಡ 29

35ಹೀಗೆ ಆರೋನನಿಗೂ ಅವನ ಕುಮಾರರಿಗೂ ನಾನು ನಿನಗೆ ಆಜ್ಞಾಪಿಸಿದ ಎಲ್ಲವುಗಳ ಪ್ರಕಾರ ನಡಿಸಿ ಏಳು ದಿವಸ ಅವರನ್ನು ಪ್ರತಿಷ್ಠೆಮಾಡಬೇಕು.

36ಪಾಪದ ಯಜ್ಞವಾದ ಹೋರಿಯನ್ನು ಪ್ರತಿದಿನ ಪ್ರಾಯಶ್ಚಿತ್ತಕ್ಕಾಗಿ ತಂದು ಯಜ್ಞವೇದಿಗಾಗಿ ಪ್ರಾಯ ಶ್ಚಿತ್ತ ಮಾಡಿದ ಮೇಲೆ ಅದರ ದೋಷವನ್ನು ಪರಿ ಹರಿಸಿ ಅದನ್ನು ಪವಿತ್ರಮಾಡುವದಕ್ಕೆ ಅದನ್ನು ಅಭಿಷೇಕಿಸಬೇಕು.

37ಏಳು ದಿವಸ ಯಜ್ಞವೇದಿಗೋಸ್ಕರ ಪ್ರಾಯಶ್ಚಿತ್ತ ಮಾಡಿ ಅದನ್ನು ಪವಿತ್ರಮಾಡಬೇಕು. ಆಗ ಯಜ್ಞ ವೇದಿಯು ಅತಿಪರಿಶುದ್ಧವಾಗಿರುವದು. ಯಜ್ಞವೇದಿ ಯನ್ನು ಮುಟ್ಟುವದೆಲ್ಲಾ ಪವಿತ್ರವಾಗಿರಬೇಕು.

38ಇದಲ್ಲದೆ ಯಜ್ಞವೇದಿಯ ಮೇಲೆ ನೀನು ಅರ್ಪಿಸ ಬೇಕಾದದ್ದು ಇದೇ; ಒಂದು ವರುಷದ ಎರಡು ಕುರಿಮರಿಗಳನ್ನು ಪ್ರತಿದಿನ ಬಿಡದೆ ಅರ್ಪಿಸಬೇಕು.

39ಒಂದು ಕುರಿಮರಿಯನ್ನು ಬೆಳಿಗ್ಗೆ ಅರ್ಪಿಸಬೇಕು, ಮತ್ತೊಂದನ್ನು ಸಾಯಂಕಾಲ ಅರ್ಪಿಸಬೇಕು.

ವಿಮೋಚನಕಾಂಡ 29 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी