ಯೆಹೆಜ್ಕೇಲನು 43:7

ಆತನು ನನಗೆ--ಮನುಷ್ಯಪುತ್ರನೇ, ನನ್ನ ಸಿಂಹಾಸನದ ಸ್ಥಳವನ್ನೂ ಅಂಗಾಲುಗಳ ಸ್ಥಳವನ್ನೂ ಮತ್ತು ನಾನು ಇಸ್ರಾಯೇಲಿನ ಮಕ್ಕಳ ಮಧ್ಯದಲ್ಲಿ ನಿತ್ಯವಾಗಿ ವಾಸವಾಗಿರುವ ಸ್ಥಳವನ್ನೂ ನನ್ನ ಪರಿಶುದ್ಧ ಹೆಸರನ್ನೂ ಇಸ್ರಾಯೇಲಿನ ಮನೆತನದವರೂ ಅಂದರೆ ಅವರಾದರೂ ಅವರ ಅರಸರಾದರೂ ತಮ್ಮ ವ್ಯಭಿಚಾರ ದಿಂದಲೂ ಎತ್ತರ ಸ್ಥಳಗಳಲ್ಲಿರುವ ಅವರ ಅರಸರ ಹೆಣಗಳಿಂದಲೂ ಇನ್ನು ಮೇಲೆ ಅಪವಿತ್ರಮಾಡುವ ದಿಲ್ಲ.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 43

5ಆಗ ಆತ್ಮವು ನನ್ನನ್ನು ಎತ್ತಿಕೊಂಡು ಒಳಗಿನ ಅಂಗಳಕ್ಕೆ ಕರೆ ತಂದಿತು; ಇಗೋ, ಕರ್ತನ ಮಹಿಮೆ ಯಿಂದ ಆಲಯವು ತುಂಬಿಕೊಂಡಿತ್ತು.

6ನಾನು ಆಲಯದೊಳಗಿಂದ ನನ್ನ ಸಂಗಡ ಮಾತನಾಡುವದನ್ನು ಕೇಳಿದೆನು; ಆ ಪುರುಷನು ನನ್ನ ಬಳಿಯಲ್ಲಿಯೇ ನಿಂತಿ ದ್ದನು.

7ಆತನು ನನಗೆ--ಮನುಷ್ಯಪುತ್ರನೇ, ನನ್ನ ಸಿಂಹಾಸನದ ಸ್ಥಳವನ್ನೂ ಅಂಗಾಲುಗಳ ಸ್ಥಳವನ್ನೂ ಮತ್ತು ನಾನು ಇಸ್ರಾಯೇಲಿನ ಮಕ್ಕಳ ಮಧ್ಯದಲ್ಲಿ ನಿತ್ಯವಾಗಿ ವಾಸವಾಗಿರುವ ಸ್ಥಳವನ್ನೂ ನನ್ನ ಪರಿಶುದ್ಧ ಹೆಸರನ್ನೂ ಇಸ್ರಾಯೇಲಿನ ಮನೆತನದವರೂ ಅಂದರೆ ಅವರಾದರೂ ಅವರ ಅರಸರಾದರೂ ತಮ್ಮ ವ್ಯಭಿಚಾರ ದಿಂದಲೂ ಎತ್ತರ ಸ್ಥಳಗಳಲ್ಲಿರುವ ಅವರ ಅರಸರ ಹೆಣಗಳಿಂದಲೂ ಇನ್ನು ಮೇಲೆ ಅಪವಿತ್ರಮಾಡುವ ದಿಲ್ಲ.

8ಅವರು ತಮ್ಮ ಹೊಸ್ತಿಲನ್ನು ನನ್ನ ಹೊಸ್ತಿಲುಗಳ ಬಳಿಯಲ್ಲಿಯೂ ತಮ್ಮ ಕಂಬಗಳನ್ನು ನನ್ನ ಕಂಬಗಳ ಬಳಿಯಲ್ಲಿಯೂ ಇಟ್ಟು ನನಗೂ ಅವರಿಗೂ ಮಧ್ಯೆ ಗೋಡೆಯನ್ನು ಹಾಕಿದ್ದರಿಂದಲೂ ಅವರು ತಾವು ಮಾಡಿರುವ ಅಸಹ್ಯಗಳಿಂದ ನನ್ನ ಪರಿಶುದ್ಧ ಹೆಸರನ್ನು ಅಪವಿತ್ರಮಾಡಿದ್ದಾರೆ; ಆದಕಾರಣ ನಾನು ನನ್ನ ಕೋಪದಲ್ಲಿ ಅವರನ್ನು ಮುಗಿಸಿ ಬಿಟ್ಟಿದ್ದೇನೆ.

9ಈಗ ಅವರು ಅವರ ವ್ಯಭಿಚಾರವನ್ನು ಮತ್ತು ಅವರ ಅರಸರ ಹೆಣಗಳನ್ನು ನನ್ನಿಂದ ದೂರವಾಗಿಡಲಿ, ನಾನು ಅವರ ಮಧ್ಯದಲ್ಲಿ ಎಂದೆಂದಿಗೂ ವಾಸಿಸುತ್ತೇನೆ ಅಂದನು.

ಯೆಹೆಜ್ಕೇಲನು 43 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी