ಆದಿಕಾಂಡ 22:11

ಆಗ ಕರ್ತನ ದೂತನು ಆಕಾಶದೊಳಗಿಂದ ಅವನನ್ನು ಕರೆದು--ಅಬ್ರಹಾಮನೇ, ಅಬ್ರಹಾಮನೇ ಅಂದಾಗ ಅವನು--ಇಲ್ಲಿ ಇದ್ದೇನೆ ಅಂದನು.

ಸಂದರ್ಭದೊಂದಿಗೆ ಓದಿ · ಆದಿಕಾಂಡ 22

9ದೇವರು ಹೇಳಿದ ಸ್ಥಳಕ್ಕೆ ಅವರು ಬಂದಾಗ ಅಬ್ರಹಾಮನು ಅಲ್ಲಿ ಬಲಿಪೀಠವನ್ನು ಕಟ್ಟಿ ಕಟ್ಟಿಗೆಗಳನ್ನು ಅದರ ಮೇಲೆ ಕ್ರಮವಾಗಿ ಜೋಡಿಸಿ ತನ್ನ ಮಗನಾದ ಇಸಾಕನನ್ನು ಕಟ್ಟಿ ಬಲಿಪೀಠದ ಮೇಲೆ ಇದ್ದ ಕಟ್ಟಿಗೆಗಳ ಮೇಲೆ ಇಟ್ಟನು.

10ಅಬ್ರಹಾಮನು ಕೈಚಾಚಿ ತನ್ನ ಮಗನನ್ನು ಕೊಲ್ಲುವದಕ್ಕೆ ಕತ್ತಿ ತೆಗೆದುಕೊಂಡನು.

11ಆಗ ಕರ್ತನ ದೂತನು ಆಕಾಶದೊಳಗಿಂದ ಅವನನ್ನು ಕರೆದು--ಅಬ್ರಹಾಮನೇ, ಅಬ್ರಹಾಮನೇ ಅಂದಾಗ ಅವನು--ಇಲ್ಲಿ ಇದ್ದೇನೆ ಅಂದನು.

12ಆಗ ಅವನು --ಹುಡಗನ ಮೇಲೆ ಕೈ ಹಾಕಬೇಡ; ಅವನಿಗೆ ಏನೂ ಮಾಡಬೇಡ. ನೀನು ದೇವರಿಗೆ ಭಯ ಪಡುತ್ತೀಯೆಂದು ಈಗ ನಾನು ತಿಳಿದಿದ್ದೇನೆ. ನಿನ್ನ ಒಬ್ಬನೇ ಮಗನನ್ನು ನನಗೆ ಅರ್ಪಿಸುವದಕ್ಕೆ ಹಿಂತೆಗೆಯಲಿಲ್ಲ ಅಂದನು.

13ಆಗ ಅಬ್ರಹಾಮನು ತನ್ನ ಕಣ್ಣುಗಳನ್ನೆತ್ತಿ ನೋಡಿದನು; ಇಗೋ, ಅವನ ಹಿಂದೆ ಒಂದು ಟಗರು ಕೊಂಬುಗಳಿಂದ ಪೊದೆಯಲ್ಲಿ ಸಿಕ್ಕಿಕೊಂಡಿತ್ತು. ಅಬ್ರಹಾಮನು ಹೋಗಿ ಆ ಟಗರನ್ನು ತೆಗೆದುಕೊಂಡು ಅದನ್ನು ತನ್ನ ಮಗನಿಗೆ ಬದಲಾಗಿ ದಹನಬಲಿಯಾಗಿ ಅರ್ಪಿಸಿದನು.

ಆದಿಕಾಂಡ 22 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी