ಯೋಹಾನನು 20:13

ಅವರು ಆಕೆಗೆ--ಸ್ತ್ರೀಯೇ, ನೀನು ಯಾಕೆ ಅಳುತ್ತೀ ಎಂದು ಕೇಳಲು ಆಕೆಯು ಅವರಿಗೆ--ನನ್ನ ಕರ್ತನನ್ನು ಅವರು ತೆಗೆದುಕೊಂಡು ಹೋಗಿದ್ದಾರೆ; ಆತನನ್ನು ಅವರು ಎಲ್ಲೀ ಇಟ್ಟಿದ್ದಾರೋ ನನಗೆ ಗೊತ್ತಿಲ್ಲ ಅಂದಳು.

ಸಂದರ್ಭದೊಂದಿಗೆ ಓದಿ · ಯೋಹಾನನು 20

11ಆದರೆ ಮರಿಯಳು ಹೊರಗೆ ಸಮಾಧಿಯ ಬಳಿಯಲ್ಲಿ ಅಳುತ್ತಾ ನಿಂತಿದ್ದಳು; ಆಕೆಯು ಅಳುತ್ತಾ ಸಮಾಧಿಯೊಳಗೆ ಬೊಗ್ಗಿ ನೋಡಿದಾಗ

12ಯೇಸು ವಿನ ದೇಹವನ್ನು ಇಟ್ಟಿದ್ದ ಸ್ಥಳದಲ್ಲಿ ಬಿಳೀವಸ್ತ್ರಗಳನ್ನು ಧರಿಸಿದ್ದ ಇಬ್ಬರು ದೂತರು, ಒಬ್ಬನು ತಲೆಯ ಕಡೆಗೂ ಮತ್ತೊಬ್ಬನು ಪಾದಗಳ ಕಡೆಗೂ, ಕೂತಿರುವದನ್ನು ಕಂಡಳು.

13ಅವರು ಆಕೆಗೆ--ಸ್ತ್ರೀಯೇ, ನೀನು ಯಾಕೆ ಅಳುತ್ತೀ ಎಂದು ಕೇಳಲು ಆಕೆಯು ಅವರಿಗೆ--ನನ್ನ ಕರ್ತನನ್ನು ಅವರು ತೆಗೆದುಕೊಂಡು ಹೋಗಿದ್ದಾರೆ; ಆತನನ್ನು ಅವರು ಎಲ್ಲೀ ಇಟ್ಟಿದ್ದಾರೋ ನನಗೆ ಗೊತ್ತಿಲ್ಲ ಅಂದಳು.

14ಆಕೆಯು ಹೀಗೆ ಹೇಳಿದ ಮೇಲೆ ಹಿಂದಕ್ಕೆ ತಿರುಗಿ ಯೇಸು ನಿಂತಿರುವದನ್ನು ಕಂಡಳು; ಆದರೆ ಆತನು ಯೇಸು ಎಂದು ಆಕೆಗೆ ತಿಳಿಯಲಿಲ್ಲ.

15ಯೇಸು ಆಕೆಗೆ--ಸ್ತ್ರೀಯೇ, ನೀನು ಯಾಕೆ ಅಳುತ್ತೀ? ಯಾರನ್ನು ಹುಡುಕುತ್ತೀ ಅನ್ನಲು ಆಕೆಯು ಆತನು ತೋಟಗಾರನೆಂದು ನೆನಸಿ ಆತನಿಗೆ--ಅಯ್ಯಾ, ನೀನು ಆತನನ್ನು ಇಲ್ಲಿಂದ ತೆಗೆದುಕೊಂಡು ಹೋಗಿದ್ದರೆ ಆತನನ್ನು ಎಲ್ಲಿ ಇಟ್ಟಿದ್ದೀ ಎಂದು ನನಗೆ ಹೇಳು; ನಾನು ಆತನನ್ನು ತೆಗೆದುಕೊಂಡು ಹೋಗುತ್ತೇ

ಯೋಹಾನನು 20 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी