ಜೆಕರ್ಯ 9:9

ಚೀಯೋನ್‌ ಕುಮಾರ್ತೆಯೇ, ಬಹಳವಾಗಿ ಉಲ್ಲಾಸಪಡು; ಯೆರೂಸಲೇಮಿನ ಕುಮಾರ್ತೆಯೇ, ಆರ್ಭಟಿಸು; ಇಗೋ, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ; ಆತನು ನೀತಿವಂತನಾಗಿಯೂ ರಕ್ಷಿಸುವಾತ ನಾಗಿಯೂ ದೀನನಾಗಿಯೂ ಕತ್ತೆಯ ಮೇಲೆ ಹೌದು, ಕತ್ತೆಯ ಮರಿಯ ಮೇಲೆ ಹತ್ತಿದವನಾಗಿಯೂ ಬರು ತ್ತಾನೆ.

ಸಂದರ್ಭದೊಂದಿಗೆ ಓದಿ · ಜೆಕರ್ಯ 9

7ಅವನ ರಕ್ತ ವನ್ನು ಅವನ ಬಾಯೊಳಗಿಂದಲೂ ಅವನ ಅಸಹ್ಯ ಗಳನ್ನು ಅವನ ಹಲ್ಲುಗಳ ನಡುವೆಯಿಂದಲೂ ನಾನು ತೆಗೆದುಹಾಕುವೆನು; ಅವನು ಸಹ ನಮ್ಮ ದೇವರಿಗಾಗಿ ಉಳಿಯುವನು; ಯೆಹೂದದಲ್ಲಿ ಪ್ರಭುವಿನ ಹಾಗೆ ಇರುವನು; ಎಕ್ರೋನು ಯೆಬೂಸಿಯನ ಹಾಗೆ ಇರು ವನು.

8ಇದಲ್ಲದೆ ಹೋಗುತ್ತಾ ಬರುತ್ತಾ ಇರುವವನ ನಿಮಿತ್ತವೂ ಸೈನ್ಯದ ನಿಮಿತ್ತವೂ ನನ್ನ ಮನೆಯ ಹತ್ತಿರ ಪಾಳೆಯಮಾಡುತ್ತೇನೆ; ಇನ್ನು ಮೇಲೆ ಉಪದ್ರ ಕೊಡುವವನು ಅವರ ಮೇಲೆ ಹಾದು ಹೋಗುವದಿಲ್ಲ; ಯಾಕಂದರೆ ಈಗ ನನ್ನ ಕಣ್ಣುಗಳಿಂದ ನೋಡಿದ್ದೇನೆ.

9ಚೀಯೋನ್‌ ಕುಮಾರ್ತೆಯೇ, ಬಹಳವಾಗಿ ಉಲ್ಲಾಸಪಡು; ಯೆರೂಸಲೇಮಿನ ಕುಮಾರ್ತೆಯೇ, ಆರ್ಭಟಿಸು; ಇಗೋ, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ; ಆತನು ನೀತಿವಂತನಾಗಿಯೂ ರಕ್ಷಿಸುವಾತ ನಾಗಿಯೂ ದೀನನಾಗಿಯೂ ಕತ್ತೆಯ ಮೇಲೆ ಹೌದು, ಕತ್ತೆಯ ಮರಿಯ ಮೇಲೆ ಹತ್ತಿದವನಾಗಿಯೂ ಬರು ತ್ತಾನೆ.

10ಇದಲ್ಲದೆ ಎಫ್ರಾಯಾಮಿನೊಳಗಿಂದ ರಥ ಗಳನ್ನೂ ಯೆರೂಸಲೇಮಿನೊಳಗಿಂದ ಕುದುರೆಗಳನ್ನೂ ತೆಗೆದುಬಿಡುವೆನು; ಯುದ್ಧದ ಬಿಲ್ಲು ಸಹ ತೆಗೆದು ಹಾಕಲ್ಪಡುವದು; ಆತನು ಅನ್ಯ ಜನಾಂಗಗಳಿಗೆ ಸಮಾ ಧಾನವನ್ನು ಹೇಳುವನು; ಆತನ ದೊರೆತನವು ಸಮುದ್ರ ದಿಂದ ಸಮುದ್ರಕ್ಕೂ ನದಿಯಿಂದ ಭೂಮಿಯ ಅಂತ್ಯಗಳ ವರೆಗೂ ಇರುವದು.

11ನಿನ್ನ ವಿಷಯವಾಗಿ ಸಹ ನಿನ್ನ ಒಡಂಬಡಿಕೆಯ ರಕ್ತದಿಂದ, ನಿನ್ನ ಸೆರೆಯವರನ್ನು ನೀರಿಲ್ಲದ ಕುಣಿಯೊ ಳಗಿಂದ ಕಳುಹಿಸಿಬಿಡುತ್ತೇನೆ.

ಜೆಕರ್ಯ 9 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी