ಯೋಹಾನನು 13:3

ತಂದೆಯು ತನ್ನ ಕೈಯಲ್ಲಿ ಎಲ್ಲವನ್ನೂ ಕೊಟ್ಟಿದ್ದಾನೆಂತಲೂ ತಾನು ದೇವರ ಬಳಿಯಿಂದ ಹೊರಟು ಬಂದಿದ್ದು ತಿರಿಗಿ ದೇವರ ಬಳಿಗೆ ಹೋಗುತ್ತೇನೆಂತಲೂ ಯೇಸು ತಿಳಿದು ಕೊಂಡು

ಸಂದರ್ಭದೊಂದಿಗೆ ಓದಿ · ಯೋಹಾನನು 13

1ಆಗ ಪಸ್ಕ ಹಬ್ಬದ ಮುಂಚೆ ಯೇಸು ತಾನು ಈ ಲೋಕದೊಳಗಿಂದ ತಂದೆಯ ಬಳಿಗೆ ಹೋಗಬೇಕಾದ ತನ್ನ ಗಳಿಗೆಯು ಬಂತೆಂದು ತಿಳಿದು ಈ ಲೋಕದಲ್ಲಿದ್ದ ತನ್ನ ಸ್ವಂತದವರನ್ನು ಪ್ರೀತಿಸಿ ಅವರನ್ನು ಅಂತ್ಯದವರೆಗೆ ಪ್ರೀತಿಸಿದನು.

2ಊಟವಾದ ಮೇಲೆ ಆತನನ್ನು ಹಿಡುಕೊಡಬೇಕೆಂಬದನ್ನು ಸೀಮೋ ನನ ಮಗನಾದ ಯೂದ ಇಸ್ಕರಿಯೋತನ ಹೃದಯದಲ್ಲಿ ಸೈತಾನನು ಆಲೋಚನೆ ಹುಟ್ಟಿಸಿದನು.

3ತಂದೆಯು ತನ್ನ ಕೈಯಲ್ಲಿ ಎಲ್ಲವನ್ನೂ ಕೊಟ್ಟಿದ್ದಾನೆಂತಲೂ ತಾನು ದೇವರ ಬಳಿಯಿಂದ ಹೊರಟು ಬಂದಿದ್ದು ತಿರಿಗಿ ದೇವರ ಬಳಿಗೆ ಹೋಗುತ್ತೇನೆಂತಲೂ ಯೇಸು ತಿಳಿದು ಕೊಂಡು

4ಊಟದಿಂದೆದ್ದು ತನ್ನ ಉಡುಪುಗಳನ್ನು ತೆಗೆದಿಟ್ಟು ಕೈ ಪಾವಡವನ್ನು ತಕ್ಕೊಂಡು ನಡುವನ್ನು ಕಟ್ಟಿಕೊಂಡನು.

5ತರುವಾಯ ಆತನು ಬೋಗುಣಿ ಯಲ್ಲಿ ನೀರು ಹಾಕಿಕೊಂಡು ಶಿಷ್ಯರ ಕಾಲುಗಳನ್ನು ತೊಳೆಯುವದಕ್ಕೂ ತಾನು ನಡುವಿಗೆ ಕಟ್ಟಿಕೊಂಡ ಕೈ ಪಾವಡದಿಂದ ಅವುಗಳನ್ನು ಒರಸುವದಕ್ಕೂ ಪ್ರಾರಂಭಿಸಿದನು.

ಯೋಹಾನನು 13 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी