೨ ಪೇತ್ರನು 3:7

ಆದರೆ ಈಗಿನ ಆಕಾಶಗಳೂ ಭೂಮಿಯೂ ಅದೇ ವಾಕ್ಯದಿಂದ ಭದ್ರವಾಗಿ ಇಡಲ್ಪಟ್ಟಿದ್ದು ನ್ಯಾಯ ತೀರ್ವಿಕೆಯ ದಿನದವರೆಗೂ ಭಕ್ತಿಹೀನರ ನಾಶನಕ್ಕಾಗಿ ಬೆಂಕಿಯು ಕಾದಿಡಲ್ಪಟ್ಟಿದೆ ಎಂಬದು.

ಸಂದರ್ಭದೊಂದಿಗೆ ಓದಿ · ೨ ಪೇತ್ರನು 3

5ಅವರು ಇದನ್ನು ಬೇಕೆಂದು ತಿಳಿಯಲಾರರು; ಅದೇನಂದರೆ ಪೂರ್ವದಲ್ಲಿದ್ದ ಆಕಾಶಗಳೂ ನೀರಿನ ಹೊರಗೆ ಮತ್ತು ನೀರಿನ ಒಳಗೆ ನಿಂತಿರುವ ಭೂಮಿಯೂ ದೇವರ ವಾಕ್ಯದಿಂದ ಉಂಟಾಗಿ

6ಆ ನೀರುಗಳಿಂದಲೇ ಆ ಕಾಲದಲ್ಲಿದ್ದ ಲೋಕವು ಜಲಪ್ರಳಯದಲ್ಲಿ ನಾಶ ವಾಯಿತು.

7ಆದರೆ ಈಗಿನ ಆಕಾಶಗಳೂ ಭೂಮಿಯೂ ಅದೇ ವಾಕ್ಯದಿಂದ ಭದ್ರವಾಗಿ ಇಡಲ್ಪಟ್ಟಿದ್ದು ನ್ಯಾಯ ತೀರ್ವಿಕೆಯ ದಿನದವರೆಗೂ ಭಕ್ತಿಹೀನರ ನಾಶನಕ್ಕಾಗಿ ಬೆಂಕಿಯು ಕಾದಿಡಲ್ಪಟ್ಟಿದೆ ಎಂಬದು.

8ಆದರೆ ಪ್ರಿಯರೇ, ಕರ್ತನ ಎಣಿಕೆಯಲ್ಲಿ ಒಂದು ದಿನವು ಸಾವಿರ ವರುಷಗಳಂತೆಯೂ ಸಾವಿರ ವರುಷಗಳು ಒಂದು ದಿನದಂತೆಯೂ ಅವೆ ಎಂಬದನ್ನು ಮಾತ್ರ ತಿಳಿಯದವರಾಗಿರಬೇಡಿರಿ.

9ಕರ್ತನು ತನ್ನ ವಾಗ್ದಾನದ ವಿಷಯವಾಗಿ ತಡಮಾಡುತ್ತಾನೆಂಬದಾಗಿ ಕೆಲವರು ಎಣಿಸುವ ಪ್ರಕಾರ ಆತನು ತಡಮಾಡುವಾತನಲ್ಲ. ಆದರೆ ಯಾವನಾದರೂ ನಾಶವಾಗುವದರಲ್ಲಿ ಆತನು ಇಷ್ಟಪಡದೆ ಎಲ್ಲರೂ ಪಶ್ಚಾತ್ತಾಪಪಡಬೇಕೆಂದು ಅಪೇಕ್ಷಿಸುವವನಾಗಿದ್ದು ನಮ್ಮ ಕಡೆಗೆ ದೀರ್ಘಶಾಂತಿ ಯುಳ್ಳವ

೨ ಪೇತ್ರನು 3 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी