ಧರ್ಮೋಪದೇಶಕಾಂಡ 12:20

ನಿನ್ನ ದೇವರಾದ ಕರ್ತನು ನಿನಗೆ ವಾಗ್ದಾನ ಮಾಡಿದ ಹಾಗೆ ನಿನ್ನ ಮೇರೆಯನ್ನು ವಿಸ್ತಾರಮಾಡು ವಾಗ ನೀನು--ನನ್ನ ಪ್ರಾಣವು ಮಾಂಸವನ್ನು ತಿನ್ನ ಬೇಕೆಂದು ನಾನು ಆಶೆಪಡುವದರಿಂದ ನಾನು ಮಾಂಸ ವನ್ನು ತಿನ್ನುವೆನು ಎಂದು ಹೇಳಿ ನಿನಗೆ ಮನಸ್ಸಿದ್ದಷ್ಟು ಮಾಂಸವನ್ನು ತಿನ್ನಬಹುದು;

ಸಂದರ್ಭದೊಂದಿಗೆ ಓದಿ · ಧರ್ಮೋಪದೇಶಕಾಂಡ 12

18ಅವುಗಳನ್ನು ನಿನ್ನ ದೇವರಾದ ಕರ್ತನ ಮುಂದೆ ನಿನ್ನ ದೇವರಾದ ಕರ್ತನು ಆದುಕೊಳ್ಳುವ ಸ್ಥಳದಲ್ಲಿ ನೀನೂ ನಿನ್ನ ಮಗನೂ ಮಗಳೂ ದಾಸನೂ ದಾಸಿಯೂ ನಿನ್ನ ಬಾಗಲುಗಳ ಲ್ಲಿರುವ ಲೇವಿಯನೂ ತಿನ್ನಬೇಕು; ಆಗ ನಿನ್ನ ಎಲ್ಲಾ ಕೈ ಕೆಲಸದಲ್ಲಿ ನಿನ್ನ ದೇವರಾದ ಕರ್ತನ ಮುಂದೆ ನೀನು ಸಂತೋಷಪಡಬೇಕು.

19ನೀನು ಭೂಮಿಯ ಮೇಲೆ ಜೀವಿಸುವ ವರೆಗೆ ಲೇವಿಯನನ್ನು ಬಿಟ್ಟುಬಿಡದ ಹಾಗೆ ನೋಡಿಕೋ.

20ನಿನ್ನ ದೇವರಾದ ಕರ್ತನು ನಿನಗೆ ವಾಗ್ದಾನ ಮಾಡಿದ ಹಾಗೆ ನಿನ್ನ ಮೇರೆಯನ್ನು ವಿಸ್ತಾರಮಾಡು ವಾಗ ನೀನು--ನನ್ನ ಪ್ರಾಣವು ಮಾಂಸವನ್ನು ತಿನ್ನ ಬೇಕೆಂದು ನಾನು ಆಶೆಪಡುವದರಿಂದ ನಾನು ಮಾಂಸ ವನ್ನು ತಿನ್ನುವೆನು ಎಂದು ಹೇಳಿ ನಿನಗೆ ಮನಸ್ಸಿದ್ದಷ್ಟು ಮಾಂಸವನ್ನು ತಿನ್ನಬಹುದು;

21ನಿನ್ನ ದೇವರಾದ ಕರ್ತನು ತನ್ನ ಹೆಸರನ್ನು ಇಡುವದಕ್ಕೆ ಆದುಕೊಂಡ ಸ್ಥಳವು ನಿನಗೆ ದೂರವಾದರೆ ಕರ್ತನು ನಿನಗೆ ಕೊಟ್ಟ ಪಶು ಕುರಿಗಳನ್ನು ನಾನು ನಿನಗೆ ಆಜ್ಞಾಪಿಸಿದಂತೆ ಕೊಯ್ದು ನಿನ್ನ ಬಾಗಲುಗಳಲ್ಲಿ ನಿನಗೆ ಮನಸ್ಸಿದ್ದಷ್ಟು ಉಣ್ಣಬಹುದು.

22ಆದರೆ ಜಿಂಕೆ ಕಡವೆಗಳನ್ನು ಉಣ್ಣುವ ಹಾಗೆ ಅದನ್ನು ಉಣ್ಣಬೇಕು. ಶುದ್ಧನೂ ಅಶುದ್ಧನೂ ಕೂಡ ಅದೇ ರೀತಿಯಲ್ಲಿ ಅದನ್ನು ತಿನ್ನಲಿ.

ಧರ್ಮೋಪದೇಶಕಾಂಡ 12 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी