ಇವರ ತರುವಾಯ ಯೆರೂಸ ಲೇಮಿನ ಅರ್ಧಕ್ಕೆ ಅಧಿಪತಿಯಾದ ಹಲ್ಲೊಹೇಷನ ಮಗನಾದ ಶಲ್ಲೂಮನೂ ಅವನ ಕುಮಾರ್ತೆಯರೂ ಭದ್ರಪಡಿಸಿದರು.
10ಇವನ ತರು ವಾಯ ಹರುಮಫನ ಮಗನಾದ ಯೆದಾಯನು ತನ್ನ ಮನೆಗೆ ಎದುರಾಗಿದ್ದದ್ದನ್ನು ಭದ್ರಪಡಿಸಿದನು. ಇವನ ತರುವಾಯ ಹಷಬ್ನೆಯನ ಮಗನಾದ ಹಟ್ಟೂಷನು ಭದ್ರಪಡಿಸಿದನು.
11ಹಾರೀಮನ ಮಗನಾದ ಮಲ್ಕೀ ಯನೂ ಪಹತ್ಮೋವಾಬನ ಮಗನಾದ ಹಷ್ಷೂ ಬನೂ ಇನ್ನೊಂದು ಭಾಗವನ್ನೂ ಒಲೆ ಬುರುಜನ್ನೂ ದುರಸ್ತು ಮಾಡಿದರು.
12ಇವರ ತರುವಾಯ ಯೆರೂಸ ಲೇಮಿನ ಅರ್ಧಕ್ಕೆ ಅಧಿಪತಿಯಾದ ಹಲ್ಲೊಹೇಷನ ಮಗನಾದ ಶಲ್ಲೂಮನೂ ಅವನ ಕುಮಾರ್ತೆಯರೂ ಭದ್ರಪಡಿಸಿದರು.
13ತಗ್ಗಿನ ಬಾಗಲನ್ನು ಹಾನೂನನೂ ಜಾನೋಹನ ನಿವಾಸಿಗಳೂ ಭದ್ರಪಡಿಸಿದರು. ಇವರು ಅದನ್ನು ಕಟ್ಟಿ ಅದರ ಕದಗಳನ್ನೂ ಜೋಡಣೆಗಳನ್ನೂ ಅಗುಳಿ ಗಳನ್ನೂ ನಿಲ್ಲಿಸಿ ತಿಪ್ಪೆ ಬಾಗಿಲ ವರೆಗೆ ಸಾವಿರ ಮೊಳ ಗೋಡೆಯನ್ನು ಕಟ್ಟಿದರು.
14ಆದರೆ ಬೆತ್ಹಕ್ಕೆರೆಮಿನ ಅರ್ಧಪಾಲಿಗೆ ಅಧಿಪತಿ ಯಾಗಿರುವ ರೆಕಾಬನ ಮಗನಾದ ಮಲ್ಕೀಯನು ತಿಪ್ಪೆ ಬಾಗಲನ್ನು ಭದ್ರಪಡಿಸಿದನು; ಇವನು ಅದನ್ನು ಕಟ್ಟಿಸಿ ಅದರ ಕದಗಳನ್ನೂ ಜೋಡಣೆಗಳನ್ನೂ ಅಗುಳಿಗಳನ್ನೂ ನಿಲ್ಲಿಸಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ