೧ ಯೋಹಾನನು 1:3

ನಮಗಿರುವ ಅನ್ಯೋನ್ಯತೆಯಲ್ಲಿ ನೀವೂ ಇರ ಬೇಕೆಂದು ನಾವು ಕಂಡು ಕೇಳಿದ್ದನ್ನು ನಿಮಗೆ ಪ್ರಸಿದ್ಧಿ ಪಡಿಸುತ್ತೇವೆ. ನಿಜವಾಗಿಯೂ ನಮಗಿರುವ ಅನ್ಯೋನ್ಯತೆಯು ತಂದೆಯ ಸಂಗಡಲೂ ಆತನ ಮಗನಾದ ಯೇಸು ಕ್ರಿಸ್ತನ ಸಂಗಡಲೂ ಇರು ವಂಥದ್ದು.

ಸಂದರ್ಭದೊಂದಿಗೆ ಓದಿ · ೧ ಯೋಹಾನನು 1

1ಆದಿಯಿಂದ ಇದ್ದದ್ದನ್ನೂ ಆ ಜೀವ ವಾಕ್ಯದ ವಿಷಯವಾಗಿ ಕೇಳಿದ್ದನ್ನೂ ಕಣ್ಣಾರೆ ಕಂಡು ನೋಡಿದ್ದನ್ನೂ ನಾವು ಕೈಯಿಂದ ಮುಟ್ಟಿದ್ದೇವೆ.

2(ಆ ಜೀವವು ಪ್ರತ್ಯಕ್ಷವಾಯಿತು, ತಂದೆಯ ಬಳಿಯಲ್ಲಿದ್ದು ನಮಗೆ ಪ್ರತ್ಯಕ್ಷವಾದಂಥ ಆ ನಿತ್ಯಜೀವವನ್ನು ನಾವು ಕಂಡು ಅದನ್ನು ಕುರಿತು ಸಾಕ್ಷಿ ಹೇಳಿ ಅದನ್ನು ನಿಮಗೆ ತಿಳಿಯಪಡಿಸುತ್ತೇವೆ).

3ನಮಗಿರುವ ಅನ್ಯೋನ್ಯತೆಯಲ್ಲಿ ನೀವೂ ಇರ ಬೇಕೆಂದು ನಾವು ಕಂಡು ಕೇಳಿದ್ದನ್ನು ನಿಮಗೆ ಪ್ರಸಿದ್ಧಿ ಪಡಿಸುತ್ತೇವೆ. ನಿಜವಾಗಿಯೂ ನಮಗಿರುವ ಅನ್ಯೋನ್ಯತೆಯು ತಂದೆಯ ಸಂಗಡಲೂ ಆತನ ಮಗನಾದ ಯೇಸು ಕ್ರಿಸ್ತನ ಸಂಗಡಲೂ ಇರು ವಂಥದ್ದು.

4ನಿಮ್ಮ ಸಂತೋಷವು ಪರಿಪೂರ್ಣ ವಾಗಬೇಕೆಂದು ನಾವು ಇವುಗಳನ್ನು ಬರೆಯುತ್ತೇವೆ.

5ನಾವು ಆತನಿಂದ ಕೇಳಿ ನಿಮಗೆ ತಿಳಿಸುವ ವಾರ್ತೆ ಯಾವದಂದರೆ--ದೇವರು ಬೆಳಕಾಗಿದ್ದಾನೆ; ಆತನಲ್ಲಿ ಎಷ್ಟು ಮಾತ್ರವೂ ಕತ್ತಲೆಯಿಲ್ಲ ಎಂಬದೇ.

೧ ಯೋಹಾನನು 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी