ಯೆಹೆಜ್ಕೇಲನು 27:13

ಯಾವಾನ್‌, ತೂಬಲ್‌, ಮೇಷೆಕ್‌ ಇವರು ನಿನ್ನ ವರ್ತಕರಾಗಿದ್ದರು; ಮನುಷ್ಯರ ಪ್ರಾಣಗಳಿಂದಲೂ (ವ್ಯಕ್ತಿ) ಹಿತ್ತಾಳೆಯ ಪಾತ್ರೆ ಗಳಿಂದಲೂ ನಿನ್ನ ಸಂತೆಯಲ್ಲಿ ವ್ಯಾಪಾರ ನಡಿಸಿದರು.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 27

11ಅರ್ವಾದಿನವರು ನಿನ್ನ ದಂಡಿನ ಸಂಗಡ ನಿನ್ನ ಗೋಡೆಗಳ ಸುತ್ತಲೂ ಮೇಲೆ ಇದ್ದರು; ಗಮ್ಮಾದ್ಯರು ನಿನ್ನ ಕೊತ್ತಲುಗಳಲ್ಲಿ ಕಾವಲಾಗಿದ್ದರು. ತಮ್ಮ ಖೇಡ್ಯಗಳನ್ನು ಸುತ್ತ ಮುತ್ತಲೂ ನಿನ್ನ ಗೋಡೆಗಳ ಮೇಲೆ ನೇತುಹಾಕಿ ಇವರು ನಿನ್ನ ಸೌಂದರ್ಯವನ್ನು ಪೂರ್ತಿಗೊಳಿಸಿದರು.

12ತಾರ್ಷೀಷಿನವರು ನಿನ್ನ ಕಡೆಯ ವರ್ತಕರಾಗಿ ಬೆಳ್ಳಿ, ಕಬ್ಬಿಣ, ತವರ, ಸೀಸಗಳಿಂದ ನಿನ್ನ ಸಂತೆಗಳಲ್ಲಿ ವ್ಯಾಪಾರ ಮಾಡಿದರು; ಅಪಾರವಾದ ಬಗೆಬಗೆಯ ಆಸ್ತಿಯು ನಿನಗೆ ಬೇಕಾಗಿತ್ತು.

13ಯಾವಾನ್‌, ತೂಬಲ್‌, ಮೇಷೆಕ್‌ ಇವರು ನಿನ್ನ ವರ್ತಕರಾಗಿದ್ದರು; ಮನುಷ್ಯರ ಪ್ರಾಣಗಳಿಂದಲೂ (ವ್ಯಕ್ತಿ) ಹಿತ್ತಾಳೆಯ ಪಾತ್ರೆ ಗಳಿಂದಲೂ ನಿನ್ನ ಸಂತೆಯಲ್ಲಿ ವ್ಯಾಪಾರ ನಡಿಸಿದರು.

14ತೋಗರ್ಮದ ಮನೆತನದವರು ಕುದುರೆಗಳಿಂ ದಲೂ ಕುದುರೆ ಸವಾರಿಗಳಿಂದಲೂ ಹೇಸರ ಕತ್ತೆ ಗಳಿಂದಲೂ ನಿನ್ನ ಸಂತೆಗಳಲ್ಲಿ ವ್ಯಾಪಾರ ನಡಿಸಿದರು.

15ದೇದಾನಿನವರು ನಿನ್ನ ವರ್ತಕರಾಗಿದ್ದರು; ಅನೇಕ ದ್ವೀಪಗಳು ನಿನ್ನ ಕೈಕೆಳಗೆ ವ್ಯಾಪಾರವನ್ನು ನಡೆಸಿದವು; ಅವರು ದಂತದಕೊಂಬುಗಳನ್ನೂ ಕರೀ ಮರಗಳನ್ನೂ ನಿನಗೆ ಕಾಣಿಕೆಯಾಗಿ ತರುತ್ತಿದ್ದರು.

ಯೆಹೆಜ್ಕೇಲನು 27 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी