೨ ಸಮುವೇಲನು 12:16

ಕರ್ತನು--ಊರೀಯನ ಹೆಂಡತಿಯು ದಾವೀದ ನಿಗೆ ಹೆತ್ತ ಕೂಸನ್ನು ಹೊಡೆದನು. ಅದು ಬಹಳ ಅಸ್ವಸ್ಥವಾಯಿತು. ದಾವೀದನು ಕೂಸಿಗೋಸ್ಕರ ದೇವ ರನ್ನು ಬೇಡಿಕೊಂಡನು. ಇದಲ್ಲದೆ ದಾವೀದನು ಉಪ ವಾಸಮಾಡಿ ಒಳಗೆ ಹೋಗಿ ರಾತ್ರಿಯೆಲ್ಲಾ ನೆಲದ ಮೇಲೆ ಬಿದ್ದುಕೊಂಡಿದ್ದನು.

ಸಂದರ್ಭದೊಂದಿಗೆ ಓದಿ · ೨ ಸಮುವೇಲನು 12

14ಹೇಗಿ ದ್ದರೂ ಈ ಕಾರ್ಯದಿಂದ ನೀನು ಕರ್ತನ ಶತ್ರುಗಳಿಗೆ ಬಹಳವಾಗಿ ದೇವದೂಷಣೆ ಮಾಡುವಂತೆ ಆಸ್ಪದ ಕೊಟ್ಟ ಕಾರಣ ನಿನಗೆ ಹುಟ್ಟಿದ ಮಗುವು ಸಹ ನಿಶ್ಚಯ ವಾಗಿ ಸಾಯುವದು ಅಂದನು.

15ಆಗ ನಾತಾನನು ತನ್ನ ಮನೆಗೆ ಹೋದನು.

16ಕರ್ತನು--ಊರೀಯನ ಹೆಂಡತಿಯು ದಾವೀದ ನಿಗೆ ಹೆತ್ತ ಕೂಸನ್ನು ಹೊಡೆದನು. ಅದು ಬಹಳ ಅಸ್ವಸ್ಥವಾಯಿತು. ದಾವೀದನು ಕೂಸಿಗೋಸ್ಕರ ದೇವ ರನ್ನು ಬೇಡಿಕೊಂಡನು. ಇದಲ್ಲದೆ ದಾವೀದನು ಉಪ ವಾಸಮಾಡಿ ಒಳಗೆ ಹೋಗಿ ರಾತ್ರಿಯೆಲ್ಲಾ ನೆಲದ ಮೇಲೆ ಬಿದ್ದುಕೊಂಡಿದ್ದನು.

17ಅವನನ್ನು ಎಬ್ಬಿಸುವದಕ್ಕೆ ಅವನ ಮನೆಯ ಹಿರಿಯರು ಅವನ ಬಳಿಗೆ ಬಂದರು; ಆದರೆ ಅವನಿಗೆ ಮನಸ್ಸಿಲ್ಲದೆ ಇತ್ತು. ಅವರ ಸಂಗಡ ಭೋಜನ ಮಾಡದೆ ಹೋದನು.

18ಮಗುವು ಏಳನೇ ದಿವಸ ಸತ್ತುಹೋಯಿತು. ಆಗ ಮಗುವು ಸತ್ತು ಹೋಯಿತೆಂದು ದಾವೀದನ ಸೇವಕರು ಅವನಿಗೆ ತಿಳಿ ಸುವದಕ್ಕೆ ಭಯಪಟ್ಟರು. ಯಾಕಂದರೆ ಇಗೋ, ಮಗುವು ಇನ್ನೂ ಬದುಕಿರುವಾಗ ನಾವು ಅವನ ಸಂಗಡ ಮಾತನಾಡುವಾಗ ಅವನು ನಮ್ಮ ಮಾತನ್ನು ಕೇಳದೆಹೋದನು. ಈಗ ಮಗುವು ಸತ್ತುಹೋಯಿ ತೆಂದು ನಾವು ಅವನಿಗೆ ಹೇಳಿದರೆ ಇನ್ನೂ ಎಷ್ಟು ಸಂಕಟಪಡುವನೋ ಅಂದುಕೊಂಡರು.

೨ ಸಮುವೇಲನು 12 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी