ವಿಮೋಚನಕಾಂಡ 35:24

ಬೆಳ್ಳಿ ಹಿತ್ತಾಳೆಗಳ ಕಾಣಿಕೆ ಗಳನ್ನು ಅರ್ಪಿಸುವದಕ್ಕೆ ಮನಸ್ಸಿದ್ದವರೆಲ್ಲರೂ ಕರ್ತನಿಗೆ ಕಾಣಿಕೆಗಳನ್ನು ತಂದರು. ಸೇವೆಯ ಎಲ್ಲಾ ಕೆಲಸ ಕ್ಕೋಸ್ಕರ ಜಾಲೀ ಮರವಿದ್ದವರು ಅದನ್ನು ತಂದರು.

ಸಂದರ್ಭದೊಂದಿಗೆ ಓದಿ · ವಿಮೋಚನಕಾಂಡ 35

22ಸ್ತ್ರೀಪುರುಷರೆಲ್ಲರೂ ಮನಃಪೂರ್ವಕವಾಗಿ ಬಂದು ಬಳೆಗಳನ್ನೂ ಮುರುವುಗಳನ್ನೂ ಉಂಗುರಗಳನ್ನೂ ಮುದ್ರೆಗಳನ್ನೂ ಚಿನ್ನದ ಎಲ್ಲಾ ಒಡವೆಗಳನ್ನೂ ತಂದರು. ಪ್ರತಿಯೊಬ್ಬನೂ ಚಿನ್ನದ ಕಾಣಿಕೆಯನ್ನು ಕರ್ತನಿಗೆ ಅರ್ಪಿಸಿದನು.

23ನೀಲಿ, ಧೂಮ್ರ, ರಕ್ತವರ್ಣ ನಯವಾದ ನಾರುಮಡಿ, ಮೇಕೆಯ ಕೂದಲು; ಟಗರುಗಳ ಕೆಂಪು ಬಣ್ಣದ ಚರ್ಮಗಳು, ಕಡಲು ಹಂದಿಯ ಚರ್ಮಗಳು, ಯಾರ ಬಳಿಯಲ್ಲಿದ್ದವೋ ಅವರೆಲ್ಲರು ತಂದರು.

24ಬೆಳ್ಳಿ ಹಿತ್ತಾಳೆಗಳ ಕಾಣಿಕೆ ಗಳನ್ನು ಅರ್ಪಿಸುವದಕ್ಕೆ ಮನಸ್ಸಿದ್ದವರೆಲ್ಲರೂ ಕರ್ತನಿಗೆ ಕಾಣಿಕೆಗಳನ್ನು ತಂದರು. ಸೇವೆಯ ಎಲ್ಲಾ ಕೆಲಸ ಕ್ಕೋಸ್ಕರ ಜಾಲೀ ಮರವಿದ್ದವರು ಅದನ್ನು ತಂದರು.

25ಜ್ಞಾನ ಹೃದಯವುಳ್ಳ ಸ್ತ್ರೀಯರೆಲ್ಲರೂ ತಮ್ಮ ಕೈಗಳಿಂದ ನೇಯ್ದ ನೀಲಿ, ಧೂಮ್ರ, ರಕ್ತವರ್ಣ ಮತ್ತು ನಯವಾದ ನಾರುಮಡಿ ಇವುಗಳನ್ನು ತಂದರು.

26ಜ್ಞಾನದಲ್ಲಿ ಹೃದಯ ಪ್ರೇರಣೆ ಹೊಂದಿದ ಸ್ತ್ರೀಯರೆಲ್ಲರೂ ಮೇಕೆ ಕೂದಲುಗಳನ್ನೂ ನೇಯ್ದರು.

ವಿಮೋಚನಕಾಂಡ 35 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी