ಇದಲ್ಲದೆ ನಾನು ನನ್ನ ಸ್ವಂತ ಮಹಿಮೆಯನ್ನು ಹುಡುಕುವದಿಲ್ಲ; ಆದರೆ ಹುಡುಕು ವವನೂ ನ್ಯಾಯತೀರಿಸುವವನೂ ಒಬ್ಬನಿದ್ದಾನೆ.
48ಆಗ ಯೆಹೂದ್ಯರು ಪ್ರತ್ಯುತ್ತರವಾಗಿ ಆತನಿಗೆ--ನೀನು ಸಮಾರ್ಯನು ಮತ್ತು ನಿನಗೆ ದೆವ್ವ ಹಿಡಿದದೆ ಎಂದು ನಾವು ಹೇಳುವದು ಸರಿಯಲ್ಲವೋ ಎಂದು ಹೇಳಿದರು.
49ಅದಕ್ಕೆ ಯೇಸು ಪ್ರತ್ಯುತ್ತರವಾಗಿ-- ನನಗೆ ದೆವ್ವ ಹಿಡಿದಿಲ್ಲ; ಆದರೆ ನನ್ನ ತಂದೆಯನ್ನು ಸನ್ಮಾನಿಸುತ್ತೇನೆ, ನೀವು ನನ್ನನ್ನು ಅವಮಾನ ಪಡಿಸುತ್ತೀರಿ.
50ಇದಲ್ಲದೆ ನಾನು ನನ್ನ ಸ್ವಂತ ಮಹಿಮೆಯನ್ನು ಹುಡುಕುವದಿಲ್ಲ; ಆದರೆ ಹುಡುಕು ವವನೂ ನ್ಯಾಯತೀರಿಸುವವನೂ ಒಬ್ಬನಿದ್ದಾನೆ.
51ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ--ಒಬ್ಬನು ನನ್ನ ಮಾತನ್ನು ಕೈಕೊಂಡರೆ ಅವನು ಎಂದಿಗೂ ಮರಣವನ್ನು ಕಾಣುವದಿಲ್ಲ ಅಂದನು.
52ಆಗ ಯೆಹೂದ್ಯರು ಆತನಿಗೆ--ನಿನಗೆ ದೆವ್ವ ಹಿಡಿದದೆ ಎಂದು ನಮಗೆ ಈಗ ತಿಳಿಯಿತು; ಅಬ್ರಹಾಮನು ಮತ್ತು ಪ್ರವಾದಿಗಳು ಸತ್ತರು; ಆದರೆ--ಯಾವನಾದರೂ ನನ್ನ ಮಾತನ್ನು ಕೈಕೊಂಡರೆ ಅವನು ಎಂದಿಗೂ ಮರಣವನ್ನು ಅನುಭವಿಸುವದಿಲ್ಲವೆಂದು ನೀನು ಹೇಳುತ್ತೀಯಲ್ಲಾ;
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ